ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್‌ ರೇವಣ್ಣಗೆ ವೈದ್ಯಕೀಯ ಪರೀಕ್ಷೆ

Published 26 ಜೂನ್ 2024, 16:14 IST
Last Updated 26 ಜೂನ್ 2024, 16:14 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಸೂರಜ್‌ ರೇವಣ್ಣ ಅವರನ್ನು ಸಿಐಡಿ ಅಧಿಕಾರಿಗಳು ಬುಧವಾರ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರಿಕ್ಷೆಗೆ ಒಳಪಡಿಸಿದರು.

ಸಿಐಡಿ ಕಚೇರಿಯಿಂದ ಪೊಲೀಸ್ ವಾಹನದಲ್ಲಿ ಸೂರಜ್ ರೇವಣ್ಣ ಅವರನ್ನು ಆಸ್ಪತ್ರೆಗೆ ಕರೆತಂದ ಸಿಐಡಿ ಅಧಿಕಾರಿಗಳು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು.

ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಮತ್ತೆ ಕಚೇರಿಗೆ ತರಲಾಯಿತು. ಸೂರಜ್ ವಿರುದ್ಧ ದೂರು ನೀಡಿದ್ದ ಮತ್ತೊಬ್ಬ ಸಂತ್ರಸ್ತನಿಗೂ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಸೂರಜ್ ವಿರುದ್ಧ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮತ್ತೊಂದು ಪ್ರಕರಣವನ್ನೂ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT