ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ‌ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ

Published 15 ಮಾರ್ಚ್ 2024, 3:53 IST
Last Updated 15 ಮಾರ್ಚ್ 2024, 3:53 IST
ಅಕ್ಷರ ಗಾತ್ರ

ಬೆಂಗಳೂರು: ಸಹಾಯ ಕೇಳಲು ಹೋಗಿದ್ದ 17 ವರ್ಷದ ಬಾಲಕಿ ಮೇಲೆ‌ ಲೈಂಗಿಕ‌ ದೌರ್ಜನ್ಯ ಎಸಗಿದ್ದ ಆರೋಪದಡಿ ಬಿ.ಎಸ್. ಯಡಿಯೂರಪ್ಪ (81) ಅವರ ವಿರುದ್ಧ‌ ಎಫ್ಐಆರ್ ದಾಖಲಾಗಿದೆ.

ಬಾಲಕಿಯ ತಾಯಿ ನೀಡಿರುವ ದೂರಿನಡಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಗುರುವಾರ (ಮಾರ್ಚ್ 14) ಪ್ರಕರಣ ದಾಖಲಾಗಿದೆ.

'ಮಕ್ಕಳ ಮೇಲಿನ ಲೈಂಗಿಕ‌ ದೌರ್ಜನ್ಯ ತಡೆ ಕಾಯ್ದೆಯಡಿ (ಪೋಕ್ಸೊ) ಪ್ರಕರಣ ದಾಖಲಾಗಿದೆ. ಬಾಲಕಿಯ ತಾಯಿ ಗುರುವಾರ ರಾತ್ರಿ ಠಾಣೆಗೆ ದೂರು ನೀಡಿದ್ದಾರೆ' ಎಂದು ಪೊಲೀಸ್ ಮೂಲಗಳು ಹೇಳಿವೆ.

ಇದೇ ಫೆಬ್ರುವರಿ 2ರಂದು ಸಹಾಯ ಕೇಳಲು ಹೋಗಿದ್ದ ವೇಳೆ ಯಡಿಯೂರಪ್ಪ ಅವರು ಬಾಲಕಿಯನ್ನು ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿ‌ನಲ್ಲಿ ಆರೋಪಿಸಲಾಗಿದೆ.

'ಮಗಳ ಮೇಲೆ ಅತ್ಯಾಚಾರ ಆಗಿತ್ತು. ಮಗಳಿಗೆ ನ್ಯಾಯ ಕೊಡಿಸುವಂತೆ ಹಾಗೂ ಪ್ರಕರಣದ ತನಿಖೆಗೆ ಎಸ್ಐಟಿ‌ ರಚಿಸುವಂತೆ ಸರ್ಕಾರದ‌ ಮೇಲೆ ಒತ್ತಡ ಹೇರುವಂತೆ ಕೋರಿ ಯಡಿಯೂರಪ್ಪ‌ ಬಳಿ ಹೋಗಿದ್ದೆ. ಅದೇ ಸಂದರ್ಭದಲ್ಲಿ ನನ್ನ 17 ವರ್ಷದ ಮಗಳ‌ ಮೇಲೆ ಯಡಿಯೂರಪ್ಪ ‌ಲೈಂಗಿಕ‌ ದೌರ್ಜನ್ಯ ಎಸಗಿದ್ದಾರೆ. ವಿಷಯ ಯಾರಿಗೂ ತಿಳಿಸದಂತೆ ನನ್ನನ್ನು ತಡೆದಿದ್ದರು. ಬಾಲಕಿ ಭಯಗೊಂಡಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡುತ್ತಿದ್ದೇನೆ' ಎಂದು ಬಾಲಕಿಯ ತಾಯಿ ದೂರಿನಲ್ಲಿ‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT