ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೈಂಗಿಕ ಕಿರುಕುಳ ಆರೋಪ: ಜಾಮೀನು ಕೋರಿ ಹೈಕೋರ್ಟ್‌ಗೆ ದೇವರಾಜೇಗೌಡ ಅರ್ಜಿ

Published 6 ಜೂನ್ 2024, 16:22 IST
Last Updated 6 ಜೂನ್ 2024, 16:22 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಹೈಕೋರ್ಟ್‌ ವಕೀಲ ಜಿ.ದೇವರಾಜೇಗೌಡ ಅವರಿಗೆ ಹಾಸನದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜಾಮೀನು ನಿರಾಕರಿಸಿರುವ ಬೆನ್ನಲ್ಲೇ, ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈ ಕುರಿತಂತೆ ದೇವರಾಜೇಗೌಡ ಗುರುವಾರ ಹೈಕೋರ್ಟ್‌ನಲ್ಲಿ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದ ಪೆನ್‌ ಡ್ರೈವ್‌ ಹಂಚಿಕೆ ಆರೋಪಗಳ ಬೆನ್ನಲ್ಲೇ ದೇವರಾಜೇಗೌಡ ವಿರುದ್ಧ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ಮಹಿಳೆಯೊಬ್ಬರು, ‘ದೇವರಾಜೇಗೌಡ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ’ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದಲ್ಲಿ ದೇವರಾಜೇಗೌಡ ಅವರನ್ನು ಪೊಲೀಸರು ಬಂಧಿಸಿದ್ದರು.

ದೇವರಾಜೇಗೌಡ ವಿರುದ್ಧ ಐಪಿಸಿ–1860ರ ಕಲಂ 354ಎ, 354ಸಿ, 448,504,506 ಮತ್ತು ಐಟಿ ಕಾಯ್ದೆಯ ಕಲಂ 66ಇ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT