ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಪ್ರಕರಣ | ವಿಮಾನ ಟಿಕೆಟ್ ಬುಕ್ ಮಾಡಿಯೂ ಭಾರತಕ್ಕೆ ಬಾರದ ಪ್ರಜ್ವಲ್‌

Published 15 ಮೇ 2024, 15:38 IST
Last Updated 15 ಮೇ 2024, 15:38 IST
ಅಕ್ಷರ ಗಾತ್ರ

ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಯಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು ಬೆಂಗಳೂರಿಗೆ ವಾಪಸ್ ಆಗುವುದನ್ನು ಮತ್ತೆ ಮುಂದೂಡಿದ್ದಾರೆ.

ಪ್ರಜ್ವಲ್‌, ಜರ್ಮನಿಯ ಮ್ಯೂನಿಕ್‌ ನಗರದಿಂದ ಬೆಂಗಳೂರಿಗೆ ಬುಧವಾರ ಮಧ್ಯಾಹ್ನ ಹೊರಟಿದ್ದು, ವಿಮಾನದ ಟಿಕೆಟ್‌ ಬುಕ್‌ ಮಾಡಿದ್ದಾರೆ ಎಂಬ ಮಾಹಿತಿ ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಲಭಿಸಿತ್ತು. ಗುರುವಾರ ಮಧ್ಯಾಹ್ನದ ವೇಳೆಗೆ ಬೆಂಗಳೂರು ತಲುಪುವ ನಿರೀಕ್ಷೆಯಿತ್ತು. ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಅಧಿಕಾರಿಗಳು ನಿಗಾ ವಹಿಸಿದ್ದರು. ಆದರೆ, ಜರ್ಮನಿಯಿಂದ ಬುಧವಾರ ಮಧ್ಯಾಹ್ನ ಹೊರಟ ವಿಮಾನದಲ್ಲಿ ಪ್ರಜ್ವಲ್‌ ಪ್ರಯಾಣಿಸಿಲ್ಲ ಎಂಬ ಮಾಹಿತಿ ಸಂಜೆ ವೇಳೆಗೆ ಎಸ್ಐಟಿಗೆ ಲಭಿಸಿತು.

ಈ ಹಿಂದೆಯೂ ಎರಡು ಬಾರಿ ವಿಮಾನ ಟಿಕೆಟ್‌ ಬುಕ್‌ ಮಾಡಿದ್ದ ಪ್ರಜ್ವಲ್‌ ಕೊನೆಕ್ಷಣದಲ್ಲಿ ರದ್ದುಪಡಿಸಿದ್ದರು.

ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಶಾಸಕ ಎಚ್‌.ಡಿ.ರೇವಣ್ಣ ಅವರಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ದು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ನಂತರದ ಬೆಳವಣಿಗೆಯಲ್ಲಿ ಪ್ರಜ್ವಲ್‌ ಅವರು ವಾಪಸ್‌ ಆಗುವ ಮಾಹಿತಿ ತನಿಖಾ ತಂಡಕ್ಕೆ ಸಿಕ್ಕಿತ್ತು ಎಂದು ಮೂಲಗಳು ಹೇಳಿವೆ.

ರೇವಣ್ಣ ಅವರು ಹೊಳೆನರಸೀಪುರಕ್ಕೆ ತೆರಳದೆ ನಗರದಲ್ಲೇ ಇದ್ದು ಪ್ರಕರಣದ ಕುರಿತು ವಕೀಲ ಸಿ.ವಿ.ನಾಗೇಶ್‌ ಅವರ ಬುಧವಾರ ಜೊತೆಗೆ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT