ಬೆಂಗಳೂರು: ಏಳು ವರ್ಷ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ನಿವೃತ್ತ ಪಿಎಸ್ಐ ಅಬ್ದುಲ್ ಹಫೀಜ್‌ನನ್ನು (74) ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
'ಕೃತ್ಯದ ಬಗ್ಗೆ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಪೊಲೀಸರು ತಿಳಿಸಿದರು.
'ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಅಬ್ದುಲ್ ಹಫೀಜ್‌ನನ್ನು ಬಂಧಿಸಲಾಗಿದೆ. ಬಾಲಕಿ ಹಾಗೂ ಆರೋಪಿಯನ್ನು ಪ್ರತ್ಯೇಕವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿ ಬರಬೇಕಿದೆ. ಕೃತ್ಯದ ಸಂಬಂಧ ಬಾಲಕಿಯಿಂದಲೂ ಹೇಳಿಕೆ ಪಡೆಯಲಾಗಿದೆ' ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.