ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಕಮಹಾದೇವಿ ವಿಶ್ವವಿದ್ಯಾಲಯ: ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ

Published 7 ಮಾರ್ಚ್ 2024, 11:28 IST
Last Updated 7 ಮಾರ್ಚ್ 2024, 11:28 IST
ಅಕ್ಷರ ಗಾತ್ರ

ವಿಜಯಪುರ: ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌.ಡಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬರಿಗೆ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ಮಹಿಳಾ ವಿಶ್ವವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಪ್ರೊ. ಮಲ್ಲಿಕಾರ್ಜುನ ಎನ್. ಎಲ್. ಅವರು ಲೈಂಗಿಕ ಕಿರುಕುಳ ನೀಡಿ, ಅಶ್ಲೀಲವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯು ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲಾ ಮತ್ತು ರಿಜಿಸ್ಟ್ರರ್‌ ಅವರಿಗೆ ದೂರು ನೀಡಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ, ‘ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯು ಫೆಬ್ರುವರಿ 27 ರಂದು ದೂರು‌ ನೀಡಿದ್ದು, ಈ ಸಂಬಂಧ ಯುಜಿಸಿ ನಿಯಮಾವಳಿ ಪ್ರಕಾರ ರಚಿತವಾಗಿರುವ ಆಂತರಿಕ ದೂರು ಸಮಿತಿಗೆ ಪ್ರಕರಣವನ್ನು ವಹಿಸಲಾಗಿದೆ’ ಎಂದರು.

‘ಆಂತರಿಕ ದೂರು ಸಮಿತಿಯು ಪ್ರಕರಣದ ಸಂಬಂಧ ಇಬ್ಬರನ್ನು ವಿಚಾರಣೆ ನಡೆಸಿ, ವರದಿ ನೀಡಿದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದರು.

ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಪ್ರೊ. ಮಲ್ಲಿಕಾರ್ಜುನ ಎನ್. ಎಲ್. ಅವರು 2017 ರಿಂದ ಮಹಿಳಾ ವಿವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿನಿಗೆ‌ ನ್ಯಾಯ ಒದಗಿಸಬೇಕು ಎಂದು ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT