ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ಯಾಂ ಭಟ್ ನೇಮಕಕ್ಕೆ ಎಎಪಿ ವಿರೋಧ

Published 28 ನವೆಂಬರ್ 2023, 16:17 IST
Last Updated 28 ನವೆಂಬರ್ 2023, 16:17 IST
ಅಕ್ಷರ ಗಾತ್ರ

ಬೆಂಗಳೂರು: ಭ್ರಷ್ಟಾಚಾರದ ಆರೋಪಗಳನ್ನು ಹೊತ್ತಿರುವ ಟಿ. ಶ್ಯಾಂ ಭಟ್ ಅವರನ್ನು ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ನೇಮಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ನಂಬಿಕೆಗೆ ಚ್ಯುತಿ ತಂದಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ದೂರಿದರು.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಭ್ರಷ್ಟ ಬಿಜೆಪಿ ಸರ್ಕಾರದಿಂದ ಬೇಸತ್ತ ರಾಜ್ಯದ ಜನರು ಮುಂದಿನ ದಿನಗಳಲ್ಲಾದರೂ ತಾವು ನೆಮ್ಮದಿಯಿಂದ ಜೀವನ ನಡೆಸುವ ಸಲುವಾಗಿ ಬದಲಾವಣೆ ಬಯಸಿದ್ದರು. ಶ್ಯಾಂ ಭಟ್ ನೇಮಕ ಮಾಡುವ ಮೂಲಕ ಸಿದ್ದರಾಮಯ್ಯ ಅವರು ಭ್ರಷ್ಟರಿಗೆ ಮಣೆ ಹಾಕಿರುವ ಕ್ರಮ ಸರಿಯಲ್ಲ’ ಎಂದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ಶ್ಯಾಮ್ ಭಟ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷರನ್ನಾಗಿ ನೇಮಿಸಿದ್ದರು. ಕೆಪಿಎಸ್‌ಸಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದ ಆರೋಪಗಳು ಬಂದಿದ್ದವು. ಈಗ ಮಾನವ ಹಕ್ಕುಗಳ ಆಯೋಗಕ್ಕೆ ನೇಮಿಸಲಾಗಿದೆ. ರಾಜ್ಯದ ಯಾವ ಜನರ ಮಾನವ ಹಕ್ಕುಗಳನ್ನು ಇವರು ರಕ್ಷಿಸುತ್ತಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಇವರನ್ನು ನೇಮಕ ಮಾಡುವ ಮುಖೇನ, ಸಿದ್ದರಾಮಯ್ಯ ತಾವು ಭ್ರಷ್ಟರ ಪರ ಎಂಬ ಸಂದೇಶ ನೀಡಲು ಹೊರಟಿದ್ದಾರೆಯೇ ಎಂದು ಅವರು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT