ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಗರದ ಹೈಸ್ಕೂಲ್ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಬೆಳಿಗ್ಗೆ 10.30ರಿಂದ ಸಾರ್ವಜನಿಕರು ದರ್ಶನ ಪಡೆಯಬಹುದಾಗಿದ್ದು, ಕಲ್ಲೇಶ್ವರ ಮಿಲ್ ಆವರಣದಲ್ಲಿ ಸಂಜೆ 4ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.

ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ನಿಧರಾಗಿರುವ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ರಸ್ತೆ ಮಾರ್ಗವಾಗಿ ದಾವಣಗೆರೆಗೆ ತರಲಾಗುತ್ತಿದೆ. ಸೋಮವಾರ ನಸುಕಿನ 4.30ಕ್ಕೆ ಎಂಸಿಸಿ ಬಡಾವಣೆಯಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನಿವಾಸ ತಲುಪಲಿದೆ. ಕುಟಂಬದ ಸದಸ್ಯರು ಹಾಗೂ ಸಂಬಂಧಿಕರಿಗೆ ಮಾತ್ರ ಇಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೆಳಿಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದಾಗಿದೆ. ಬಳಿಕ ಬಂಬೂಬಜಾರ್ ರಸ್ತೆಯ ಕಲ್ಲೇಶ್ವರ ಮಿಲ್ ಆವರಣಕ್ಕೆ ಮೆರವಣಿಗೆ ಮೂಲಕ ಕೊಂಡೊಯ್ದು ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಶಾಮನೂರು ಶಿವಶಂಕರಪ್ಪ ಅವರ ಪತ್ನಿ ಪಾರ್ವತಮ್ಮ ಅವರ ಅಂತ್ಯಕ್ರಿಯೆ ಕೂಡ ಇಲ್ಲಿಯೇ ನಡೆದಿತ್ತು ಎಂದು ಮೂಲಗಳು ಮಾಹಿತಿ ನೀಡಿವೆ.

ಅಂತಿಮ ದರ್ಶನ ಪಡೆದ ಗಣ್ಯರು

ಬೆಂಗಳೂರು: ಕಾಂಗ್ರೆಸ್ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಅವರ ಅಭಿಮಾನಿಗಳು, ಪಕ್ಷದ ಮುಖಂಡರು ಅಧಿಕ ಸಂಖ್ಯೆಯಲ್ಲಿ ಸ್ಪರ್ಶ ಆಸ್ಪತ್ರೆಯತ್ತ ಧಾವಿಸಿದರು.

ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯ ಸುತ್ತ ಬಿಗಿಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರೂ, ಆಸ್ಪತ್ರೆಯ ಒಳಗೆ ಯಾರನ್ನೂ ಬಿಡಲಿಲ್ಲ. ಪೊಲೀಸರು ಎಲ್ಲರನ್ನೂ ಹೊರಗೆ ನಿಲ್ಲಿಸಿ, ಕುಟುಂಬದವರಿಗೆ ಅಷ್ಟೇ ಒಳಗೆ ಹೋಗಲು ಅವಕಾಶ ಮಾಡಿಕೊಟ್ಟಿದ್ದರು.

ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಸದಾಶಿವನಗರದಲ್ಲಿ ಇರುವ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಗೆ ತರಲಾಯಿತು. ಅಲ್ಲಿ ಸೇರಿದ್ದ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.

ಸುತ್ತೂರು ಮಠಾಧೀಶ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ವಚನಾನಂದ ಶ್ರೀ, ಸಚಿವ ವಿ.ಸೋಮಣ್ಣ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕರಾದ ಎಂ.ಕೃಷ್ಣಪ್ಪ, ಅಶ್ವತ್ಥನಾರಾಯಣ ಸೇರಿದಂತೆ ವಿವಿಧ ಮಠಾಧೀಶರು, ರಾಜಕೀಯ ಪಕ್ಷದ ಮುಖಂಡರು ಅಂತಿಮ ದರ್ಶನ ಪಡೆದರು. ಬಳಿಕ ಪಾರ್ಥಿವ ಶರೀರವನ್ನು ದಾವಣಗೆರೆಗೆ ತೆಗೆದುಕೊಂಡು ಹೋಗಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.