ಬೆಂಗಳೂರು: ‘ದ್ವೇಷ ಭಾಷಣ ಮಾಡಿದ ಆರೋಪದಡಿ ವಿಶ್ವಹಿಂದೂ ಪರಿಷತ್ ನಾಯಕ ಶರಣ್ ಕುಮಾರ್ ಅಲಿಯಾಸ್ ಶರಣ್ ಪಂಪ್ವೆಲ್ ಅವರನ್ನು ಬಂಧಿಸಬಾರದು ಮತ್ತು ಹೈಕೋರ್ಟ್ ಅನುಮತಿ ನೀಡದ ಹೊರತು ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬಾರದು’ ಎಂದು ಹೈಕೋರ್ಟ್ ಆದೇಶಿಸಿದೆ.

‘ನನ್ನ ವಿರುದ್ಧ ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಶರಣ್ ಪಂಪ್ವೆಲ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹೈಕೋರ್ಟ್ ವಕೀಲ ಸುಯೋಗ ಹೇರಳೆ ಅವರ ವಾದ ಆಲಿಸಿದ ನ್ಯಾಯಪೀಠ, ‘ಶರಣ್ ಪಂಪ್ವೆಲ್ ಅವರನ್ನು ಪೊಲೀಸರು ಬಂಧಿಸಬಾರದು. ಅವರ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗಬಾರದು ಮತ್ತು ಈ ನ್ಯಾಯಪೀಠದ ಅನುಮತಿ ಇಲ್ಲದೆ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬಾರದು. ಶರಣ್ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಬೇಕು’ ಎಂದು ಆದೇಶಿಸಿತು. ಪ್ರತಿವಾದಿ ಉಡುಪಿ ಪೊಲೀಸ್ ಠಾಣೆ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಲಾಗಿದೆ.

ಕುಂಜಾಲುವಿನಲ್ಲಿ ನಡೆದ ಗೋಹತ್ಯೆ ಉದ್ದೇಶಿಸಿ ಪತ್ರಿಕಾಗೋಷ್ಠಿಯಲ್ಲಿ ಶರಣ್ ಪಂಪ್ವೆಲ್, ‘ಇಸ್ಲಾಮಿಕ್ ಮತೀಯವಾದಿಗಳು ಹಿಂದೂ ವಿರೋಧಿ, ದೇಶ ವಿರೋಧಿ ಚಟುವಟಿಕೆಗಳಿಗೆ ಹಿಂದೂಗಳನ್ನು ಬಳಸುವಂತಹ ಹೊಸ ದಾರಿಯನ್ನು ಹುಡುಕಿದ್ದಾರೆ. ಇದು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ವ್ಯಕ್ತವಾಗಿದೆ’ ಎಂದು ಮಾತನಾಡಿರುವುದಾಗಿ ಆರೋಪಿಸಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ–2023ರ ಕಲಂ 353 (2) ಅಡಿಯಲ್ಲಿ ಇದೇ 3ರಂದು ಸ್ವಯಂ ಪ್ರೇರಿತ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

ನವೀನ್ ನೆರಿಯ ವಿರುದ್ಧದ ಪ್ರಕರಣಕ್ಕೂ ತಡೆ

‘ಹಿಂದೂ ಮುಖಂಡರ ಮನೆಗಳ ಮೇಲಷ್ಟೇ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿರುವುದು ಯಾಕೆ’ ಎಂದು ಪೊಲೀಸ್ ಠಾಣೆಗೆ ತೆರಳಿ ಪ್ರಶ್ನಿಸಿದ ಕಾರಣಕ್ಕೆ ವಿಶ್ವಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಜಿ.ನವೀನ್ ಕುಮಾರ್ (ನವೀನ್ ನೆರಿಯ) ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

‘ನನ್ನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿ ಜಿ.ನವೀನ್ ಕುಮಾರ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ‘ಪೊಲೀಸರು ಅರ್ಜಿದಾರರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ದುರುದ್ದೇಶದಿಂದ ಅವರ ಮಾತುಗಳಿಗೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿ, ದುರುದ್ದೇಶಪೂರಿತವಾದ ಈ ದೂರನ್ನು ವಜಾಗೊಳಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಪ್ರಕರಣದ ಮುಂದಿನ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಿತು. ಅಂತೆಯೇ, ಪ್ರತಿವಾದಿ ಪ್ರಾಸಿಕ್ಯೂಷನ್ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು. ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 353(2)ರ ಅಡಿಯಲ್ಲಿ ನವೀನ್ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಸುಯೋಗ ಹೇರಳೆ ವಕಾಲತ್ತು ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.