ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷ ಸೂಚಿಸಿದವರಿಗೆ ಮತ ಹಾಕಿದ್ದೇನೆ: ಶರಣಗೌಡ ಕಂದಕೂರ

Published 27 ಫೆಬ್ರುವರಿ 2024, 7:23 IST
Last Updated 27 ಫೆಬ್ರುವರಿ 2024, 7:23 IST
ಅಕ್ಷರ ಗಾತ್ರ

ಬೆಂಗಳೂರು: 'ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ಸೂಚಿಸಿದ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ' ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ತಿಳಿಸಿದರು.

ಮತದಾನದ ಬಳಿಕ ಮಾತನಾಡಿದ ಅವರು, 'ಚುನಾವಣೆಯಲ್ಲಿ ವಿಪ್ ಜಾರಿಗೊಳಿಸಲಾಗಿತ್ತು. ಪಕ್ಷ ಯಾವ ಅಭ್ಯರ್ಥಿಗೆ‌ಸೂಚಿಸಿತ್ತೋ ಅದೇ ಅಭ್ಯರ್ಥಿಗೆ ಮತ ಹಾಕಿದ್ದೇನೆ' ಎಂದರು.

ಈ ನಡುವೆ, ಕಾಂಗ್ರೆಸ್‌ ಪರ ಮತ ಚಲಾಯಿಸಿರುವುದಾಗಿ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ ಘೋಷಿಸಿದ್ದಾರೆ.

ಅಡ್ಡ ಮತದಾನ ಮಾಡಿರುವ ಸೋಮಶೇಖರ್ ಅವರ ನಡೆ ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಅವರ ಸದಸ್ಯತ್ವ ಅನರ್ಹತೆಗೊಳಿಸುವಂತೆ ಕೋರಿ‌ ಸ್ಪೀಕರ್ ಗೆ ದೂರು‌ ನೀಡಲು ನಿರ್ಧಾರ ಕೈಗೊಂಡಿರುವುದಾಗಿ ಪ್ರತಿಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT