2,000 ಮೆಗಾವಾಟ್ ಸಾಮರ್ಥ್ಯದ ಭೂಗರ್ಭ ಜಲ ವಿದ್ಯುತ್ ಯೋಜನೆಯ ಅನುಷ್ಠಾನಕ್ಕಾಗಿ ಕೆಪಿಸಿಎಲ್, ಜೋಗ ಸುತ್ತಮುತ್ತ 15 ಸ್ಥಳಗಳಲ್ಲಿ ಭೂಮಿಯಲ್ಲಿ ರಂಧ್ರ ಕೊರೆದು ಸಮೀಕ್ಷೆ ನಡೆಸುತ್ತಿದೆ. ಸಮೀಕ್ಷೆಗೆ ಅನುಮತಿ ನೀಡುವ ಸಂಬಂಧ ರಾಜ್ಯ ವನ್ಯಜೀವಿ ಮಂಡಳಿ ಮತ್ತು ಕೇಂದ್ರ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗಳು ಒಪ್ಪಿಗೆ ನೀಡಿರುವ ಸಭೆಯ ನಡಾವಳಿಗಳನ್ನು ಹತ್ತು ದಿನಗಳೊಳಗೆ ಸಲ್ಲಿಸುವಂತೆ ನ್ಯಾಯಾಲಯ ಪ್ರತಿವಾದಿ ವಕೀಲರಿಗೆ ಸೂಚಿಸಿತು.