ಅರಣ್ಯ ನಾಶಕ್ಕೆ ಕಾರಣವಾಗುವ ಈ ಯೋಜನೆಗೆ ಒಪ್ಪಿಗೆ ಕೊಡಬಾರದು ಎಂದು ಅರಣ್ಯ ಸಚಿವಾಲಯದ ಪ್ರಾದೇಶಿಕ ಕಚೇರಿಯ ಉಪ ಅರಣ್ಯ ಮಹಾನಿರ್ದೇಶಕರ (ಡಿಐಜಿಎಫ್) ಸ್ಥಳ ಪರಿಶೀಲನಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು. ಈ ವರದಿಯಲ್ಲಿನ ಅಂಶಗಳನ್ನು ಉಲ್ಲೇಖಿಸಿರುವ ಸಮಿತಿಯು, ಗೇರುಸೊಪ್ಪದಿಂದ ತಳಕೊಪ್ಪಕ್ಕೆ ನಿರ್ಮಿಸಲಾಗಿರುವ ವಿದ್ಯುತ್ ಪ್ರಸರಣಾ ಮಾರ್ಗವು 1980ರ ಅರಣ್ಯ ಕಾಯ್ದೆಯ ಉಲ್ಲಂಘನೆ ಎಂದು ಬೊಟ್ಟು ಮಾಡಿದೆ.