ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆ: ಕೇಂದ್ರಕ್ಕೆ ಶೀಘ್ರ ಪ್ರಸ್ತಾವ

Published : 13 ಆಗಸ್ಟ್ 2024, 15:49 IST
Last Updated : 13 ಆಗಸ್ಟ್ 2024, 15:49 IST
ಫಾಲೋ ಮಾಡಿ
Comments

ಬೆಂಗಳೂರು: ‘ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರದಿಂದ ಅನುಮತಿ ಪಡೆಯಲು ಒಂದು ತಿಂಗಳ ಒಳಗೆ ಪ್ರಸ್ತಾವ ಸಲ್ಲಿಸಬೇಕು’ ಎಂದು ತಮ್ಮ ಇಲಾಖೆಯ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ನಿರ್ದೇಶನ ನೀಡಿದರು.

ಅರಣ್ಯ ಮತ್ತು ಪರಿಸರಕ್ಕೆ ಹಾನಿ ಆಗದಂತೆ ಈ ಯೋಜನೆ ಅನುಷ್ಠಾನಗೊಳಿಸುವ ಕುರಿತು ಇಂಧನ ಸಚಿವ ಕೆ.ಜೆ. ಜಾರ್ಜ್ ಮತ್ತು ಈಶ್ವರ ಖಂಡ್ರೆ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ಮಂಗಳವಾರ ನಡೆಯಿತು.

ಶರಾವತಿ ಜಲ ವಿದ್ಯುತ್ ಯೋಜನೆ ವ್ಯಾಪ್ತಿಯ ಕಾರಿಡಾರ್‌ನಲ್ಲಿಯೇ ಈ ಯೋಜನೆ ಅನುಷ್ಠಾನಗೊಳ್ಳಲಿರುವುದರಿಂದ ಕನಿಷ್ಠ ಪ್ರಮಾಣದಲ್ಲಿ ಅರಣ್ಯ ಹಾನಿ ಆಗಲಿದೆ ಎಂದು ಕೆ.ಜೆ.ಜಾರ್ಜ್ ಮತ್ತು ಇಂಧನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

‘ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಯು ಸದ್ಯ ವಿದ್ಯುತ್ ಉತ್ಪಾದನೆ ಮಾಡುವ ಜಲಾಶಯದಿಂದ ಹರಿಯುವ ನೀರನ್ನು ಮೋಟಾರ್ ಪಂಪ್‌ಗಳ ಮೂಲಕ ಮೇಲಕ್ಕೆ ಹರಿಸಿ ಮತ್ತೆ ವಿದ್ಯುತ್ ಉತ್ಪಾದಿಸುವ ಯೋಜನೆಯಾಗಿದೆ. ಪರಿಸರ ಮತ್ತು ಅರಣ್ಯದ ಮೇಲೆ ಯಾವುದೇ ಗಂಭೀರ ಪರಿಣಾಮ ಉಂಟಾಗದಂತೆ ಅಂದಾಜು 2,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಉತ್ಪಾದಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಅಗತ್ಯ ಅನುಮತಿ ನೀಡಲು ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಜಾರ್ಜ್ ಅವರು ಖಂಡ್ರೆಗೆ ಮನವಿ ಮಾಡಿದರು.

ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT