ಬೆಂಗಳೂರು: ‘ಮುಖ್ಯಮಂತ್ರಿ ಮತ್ತು ತಮ್ಮ ವಿರುದ್ಧ ಕೇರಳದ ದೇವಸ್ಥಾನದ ಸಮೀಪದ ಖಾಸಗಿ ಜಾಗದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿರುವುದಾಗಿ ಹೇಳಿದ್ದೇನೆಯೇ ಹೊರತು ಕೇರಳದ ದೇವಸ್ಥಾನದಲ್ಲಿ ನಡೆಯುತ್ತಿರುವುದಾಗಿ ಹೇಳಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದರು.

‘ಕೇರಳದ ದೇವಾಲಯಗಳಲ್ಲಿ ವಾಮಾಚಾರ, ಪ್ರಾಣಿಬಲಿ ನಡೆಯುತ್ತಿಲ್ಲ’ ಎಂಬ ಕೇರಳ ಸಚಿವೆಯ ಹೇಳಿಕೆ ಬಗ್ಗೆ ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ನಾನು ದೇವಾಲಯದಲ್ಲಿ ವಾಮಾಚಾರ ನಡೆಯುತ್ತಿದೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಕೇರಳ ದೇವರ ನಾಡು. ಅಲ್ಲಿನ ದೇವಾಲಯಗಳ ಬಗ್ಗೆ ನನಗೆ ಅಪಾರ ಗೌರವಿದೆ. ನಾನು ಯಾರ ಭಾವನೆಗಳಿಗೂ ಧಕ್ಕೆಯಾಗುವಂತೆ ನಡೆದುಕೊಂಡಿಲ್ಲ’ ಎಂದರು.

‘ಇತ್ತೀಚೆಗೆ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದೆ. ನಾನು ರಾಜರಾಜೇಶ್ವರ ದೇವರ ಭಕ್ತ. ಎಲ್ಲಿ ವಾಮಾಚಾರ ನಡೆಯುತ್ತಿದೆ ಎನ್ನುವ ಬಗ್ಗೆ ಮಾಹಿತಿ ನೀಡಲು ಆ ದೇವಾಲಯದ ಹೆಸರು ಬಳಸಿದೆ. ಅದರ ಆಸುಪಾಸಿನ ಖಾಸಗಿ ಜಾಗದಲ್ಲಿ ನಡೆದಿದೆ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ಯಾರು ಈ ಯಾಗದ ಹಿಂದೆ ಇದ್ದಾರೆ ಎಂದು ಈಗ ಬಹಿರಂಗಪಡಿಸಲು ನಾನು ಇಚ್ಛಿಸುವುದಿಲ್ಲ. ಈ ಪ್ರಕರಣದ ಬಗ್ಗೆ ತನಿಖೆ ಮಾಡುವುದಾಗಿ ಕೇರಳದ ಸಚಿವರು ತಿಳಿಸಿದ್ದು, ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.