ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಬೆಳಗಾವಿಯಿಂದ ಸ್ಪರ್ಧೆ ತೀರ್ಮಾನವಿಲ್ಲ: ಶೆಟ್ಟರ್‌

Published 17 ಫೆಬ್ರುವರಿ 2024, 15:40 IST
Last Updated 17 ಫೆಬ್ರುವರಿ 2024, 15:40 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಯಾವುದೇ ನಿರ್ಧಾರ ಮಾಡಿಲ್ಲ ಎಂದು ಬಿಜೆಪಿ ಮುಖಂಡ ಜಗದೀಶ ಶೆಟ್ಟರ್‌ ಹೇಳಿದರು. 

ಬಿಜೆಪಿಯ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಬಂದಿರುವ ಅವರು ಸುದ್ದಿಗಾರರ ಜತೆಗೆ ಮಾತನಾಡಿ, ‘ಬೆಳಗಾವಿ ಕ್ಷೇತ್ರಕ್ಕೆ ನನ್ನ ಹೆಸರು ಕೇಳಿ ಬರುತ್ತಿದೆ. ಯಾವ ಉದ್ದೇಶದಿಂದ ನನ್ನ ಹೆಸರು ಬರುತ್ತಿದೆ ಎಂಬುದು ಗೊತ್ತಿಲ್ಲ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ’ ಎಂದರು. 

ಉದಾಸಿ ಮನವೊಲಿಕೆ ‍ಯತ್ನ: ‘ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಂಸದ ಶಿವಕುಮಾರ್ ಉದಾಸಿ ಅವರನ್ನು ಮತ್ತೊಮ್ಮೆ ಮನವೊಲಿಸುವ ಕೆಲಸ ಮಾಡುತ್ತೇವೆ. ಆದರೆ, ಅವರು ಈ ಬಾರಿ ಗಟ್ಟಿಯಾಗಿ ನಿಂತಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಉದಾಸಿ ಈ ಹಿಂದೆ ಸ್ಪಷ್ಟಪಡಿಸಿದ್ದರು. ಬೊಮ್ಮಾಯಿ ಸುದ್ದಿಗಾರರ ಜತೆಗೆ ಮಾತನಾಡಿ. ‘ಹಾವೇರಿ ಕ್ಷೇತ್ರಕ್ಕೆ ನಾನು ಆಕಾಂಕ್ಷಿ ಅಲ್ಲ. ನಾನು ಯಾವುದೇ ಆಕಾಂಕ್ಷೆ ಇಟ್ಟುಕೊಂಡಿಲ್ಲ. ಈ ಬಗ್ಗೆ ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT