ಶಿಕಾರಿಪುರ: ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮಂತ್ರಿ ಸ್ಥಾನ ಸಿಗಲಿ ಎಂಬ ಆಶಯದಿಂದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಮನೆದೇವರಾದ ಪಟ್ಟಣದ ಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

‘ಮೂರುಬಾರಿ ಶಾಸಕನಾಗಿರುವ ನಾನೂ ಮಂತ್ರಿ ಸ್ಥಾನದ ಆಕಾಂಕ್ಷಿ. ಅದಕ್ಕಾಗಿ ಮನೆದೇವರಿಗೆ ಪೂಜೆ ಸಲ್ಲಿಸುವುದಕ್ಕಾಗಿ ಬಂದಿದ್ದೇನೆ. ಜಾತ್ರೆ ಸಂದರ್ಭದಲ್ಲಿ ದೇವರಿಗೆ ಆಗಮಿಸಲು ಆಗಿರಲಿಲ್ಲ. ಹಾಗಾಗಿ ಈಗ ಬಂದಿದ್ದೇನೆ ಎಂದು ಹೇಳಿದರು.

ಶರಾವತಿ, ಮಡೇನೂರು ಡ್ಯಾಂ ನಿರ್ಮಾಣಕ್ಕೆ ಈ ಭಾಗದ ಸಾಕಷ್ಟು ಜನ ತಮ್ಮ ಮೂಲನೆಲೆಯನ್ನು ಕಳೆದುಕೊಂಡಿದ್ದಾರೆ. ಇದೀಗ ಅಣುಸ್ಥಾವರ ಸ್ಥಾಪನೆಗೆ ವಿಮಾನದಲ್ಲಿ ಸರ್ವೇ ಮಾಡುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಅಣುಸ್ಥಾವರ ನಿರ್ಮಾಣ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುತ್ತದೆ. ಸಂಸದರು ಅಣುಸ್ಥಾವರ ಆಗದಂತೆ ತಡೆಯಬೇಕು ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಾಗರಾಜಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳ ಶಿವರಾಂ, ಮುಖಂಡರಾದ ಗೋಣಿ ಮಾಲತೇಶ್, ರವೀಂದ್ರ, ಪಾಲಾಕ್ಷಣ್ಣ, ಭಂಡಾರಿ ಮಾಲತೇಶ್, ಚಂದ್ರಶೇಖರಗೌಡ, ಸುರೇಶ್ ಧಾರವಾಡ, ಹುಲ್ಮಾರ್ ಶಿವು ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-42-491382362

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.