ಶಿರಸಿ: ಕೇಂದ್ರದ 15ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ವಹಿಸಬೇಕು ಎಂದು ಶಿರಸಿ ಪಶ್ಚಿಮ ಭಾಗದ ಚುನಾಯಿತ ಗ್ರಾಮ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ನವೀನ ಶೆಟ್ಟಿ ಆಗ್ರಹಿಸಿದರು.

ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಂಚಾಯತ್ರಾಜ್ ವ್ಯವಸ್ಥೆಯಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತಾಧಿಕಾರಿಗಳ ಆಡಳಿತ ಇರುವುದರಿಂದ ಕೇಂದ್ರದಿಂದ ಬರಬೇಕಾದ ಸಾವಿರಾರು ಕೋಟಿ ರೂಪಾಯಿ ಅನುದಾನ ಸ್ಥಗಿತಗೊಂಡಿದೆ’ ಎಂದು ಆರೋಪಿಸಿದರು.

‘15ನೇ ಹಣಕಾಸು ಆಯೋಗದ ನಿಯಮದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಪ್ರತಿನಿಧಿಗಳಿರಬೇಕು, ಇಲ್ಲವಾದಲ್ಲಿ ಹಣ ಬಿಡುಗಡೆಯಾಗುವುದಿಲ್ಲ. ರಾಜ್ಯ ಸರ್ಕಾರದ ವಿಳಂಬ ನೀತಿಯಿಂದಾಗಿ ಸುಮಾರು ₹3 ರಿಂದ ₹4 ಸಾವಿರ ಕೋಟಿ ಅನುದಾನ ನಷ್ಟವಾಗುವ ಭೀತಿ ಎದುರಾಗಿದೆ. 2021-26ರ ಅವಧಿಗೆ ನಿಗದಿಪಡಿಸಲಾದ ₹18,948 ಕೋಟಿಗಳಲ್ಲಿ ಬಾಕಿ ಇರುವ ಮೊತ್ತವನ್ನು ಪಡೆಯಲು ಮಾರ್ಚ್ 31ರ ಒಳಗಾಗಿ ಚುನಾವಣೆ ನಡೆಸಿ ಚುನಾಯಿತ ಪ್ರತಿನಿಧಿಗಳು ಅಧಿಕಾರ ವಹಿಸಿಕೊಳ್ಳುವುದು ಅನಿವಾರ್ಯವಾಗಿದೆ. ರಾಜ್ಯ ಸರ್ಕಾರದ ಬೇಜವಾಬ್ದಾರಿತನದಿಂದ ಪ್ರತಿ ಪಂಚಾಯಿತಿಗೆ ಬರಬೇಕಾದ ಅಂದಾಜು ₹43 ಲಕ್ಷ ಹಣ ಬಾರದಂತಾಗಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ’ ಎಂದರು.

‘ಕೇಂದ್ರ ಕೇಳಿರುವ ದಾಖಲೆಗಳನ್ನು ರಾಜ್ಯ ಸರ್ಕಾರ ಕೂಡಲೇ ಒದಗಿಸಿ ಅನುದಾನ ಬಿಡುಗಡೆಗೆ ಶ್ರಮಿಸಬೇಕು. ತಪ್ಪಿದಲ್ಲಿ ರಾಜ್ಯಮಟ್ಟದಲ್ಲಿ ಬೃಹತ್ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಒಕ್ಕೂಟದ ಪದಾಧಿಕಾರಿಗಳಾದ ನಾರಾಯಣ ಹೆಗಡೆ, ಮಂಜುನಾಥ ಪೂಜಾರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-20-73352661

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.