ಬೆಂಗಳೂರು: ಜಾತಿ ಗಣತಿ ವಿಚಾರವಾಗಿ ಈಗಲೇ ಸಭೆ ಮಾಡಿ ಗೊಂದಲ ಸೃಷ್ಟಿಸುವುದು ಬೇಡ, ಸಭೆಯನ್ನು ಮುಂದೂಡಿ. ಈ ವಿಚಾರವಾಗಿ ಶ್ರೀಗಳ ಜೊತೆ ನಾನು ಮಾತನಾಡುತ್ತೇನೆ ಎಂದು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ಧಿಗಾರರ ಜತೆ ಭಾನುವಾರ ಮಾತನಾದಿದ ಅವರು, ಒಕ್ಕಲಿಗರ ಸಂಘದ ಪದಾಧಿಕಾರಿಗಳ ಜತೆ ಸಭೆ ಮಾಡಿದ್ದೀರಿ ಎಂದು ಕೇಳಿದಾಗ, "ನಾನು ಯಾವುದೇ ಸಭೆ ಮಾಡಿಲ್ಲ. ಅದರ ಅವಶ್ಯಕತೆ ನನಗಿಲ್ಲ. ಇಂದು ಜಾತಿ ಗಣತಿ ವಿಚಾರವಾಗಿ ಪ್ರತ್ಯೇಕವಾಗಿ ಸಭೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದರು. ಆ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದೇನೆ. ಈ ಸಭೆಯನ್ನು ಮುಂದಕ್ಕೆ ಹಾಕಿ, ಯಾರಿಗೂ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ" ಎಂದು ಭರವಸೆ ನೀಡಿರುವುದಾಗಿ ತಿಳಿಸಿದರು.

ಮತ್ತೆ ಕಿತ್ತಾಡಿಕೊಂಡರೆ ಆಡಳಿತಾಧಿಕಾರಿ ನೇಮಕ ಎಚ್ಚರಿಕೆ: ಒಕ್ಕಲಿಗರ ಸಂಘದ ಹೊಸ ಪದಾಧಿಕಾರಿಗಳ ತಂಡ ರಾಜಿ ಮಾಡಿಕೊಂಡು ನನ್ನನ್ನು ಭೇಟಿ ಮಾಡಲು ಬಂದಿದ್ದರು. ಮತ್ತೆ ಪದಾಧಿಕಾರಿಗಳ ಮಧ್ಯೆ ಕಿತ್ತಾಟ ನಡೆದರೆ ಆಡಳಿತಾಧಿಕಾರಿ ನೇಮಿಸುವುದಾಗಿ ಎಚ್ಚರಿಕೆ ನೀಡಿದ್ದೇನೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ ಎಂದರು.

ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸಿ.ಟಿ.ರವಿ ನಿಂದಿಸಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವ ಬಗ್ಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಗೃಹ ಸಚಿವರಿಗೆ ಪತ್ರ ಬರೆದಿರುವ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಗೃಹಮಂತ್ರಿಗಳೇ ಉತ್ತರ ನೀಡುತ್ತಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.