ತೀರ್ಥಹಳ್ಳಿ: ‘ಅಹಿಂದ ವರ್ಗಕ್ಕೆ ಕ್ಷೇತ್ರವಾರು ಪ್ರಾತಿನಿಧ್ಯ ದೊರೆಯಬೇಕು. ತಬ್ಬಲಿ, ಶೋಷಿತ, ಅವಕಾಶ ವಂಚಿತ ಸಮುದಾಯಕ್ಕೆ ಸರ್ಕಾರ ಎಲ್ಲ ಕ್ಷೇತ್ರಗಳಲ್ಲಿಯೂ ಅವಕಾಶ ಕಲ್ಪಿಸಿಕೊಡಬೇಕು’ ಎಂದು ಮಲೆನಾಡು ಅಹಿಂದ ಸಂಘಟನೆಯ ಅಧ್ಯಕ್ಷ ಸಚಿನ್ ಗರಗ ಒತ್ತಾಯಿಸಿದರು.

‘ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ದಲಿತ ವರ್ಗಕ್ಕೆ ಇಂದಿಗೂ ಸಮಾನ ಅವಕಾಶಗಳು ದೊರೆಯುತ್ತಿಲ್ಲ. ಶೋಷಿತ ವರ್ಗವನ್ನು ಮೀಸಲಾತಿಗೆ ಸೀಮಿತಗೊಳಿಸಲಾಗುತ್ತಿದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ಅಹಿಂದ ವರ್ಗವನ್ನು ಪ್ರತಿನಿಧಿಸುತ್ತಿದ್ದ ದೇವರಾಜ ಅರಸು ರಾಜ್ಯದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದ್ದಾರೆ. ಅದೇ ಹಾದಿಯಲ್ಲಿ ಸಾಗಿದ ಸಿದ್ದರಾಮಯ್ಯ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ರಾಜೀನಾಮೆ ನೀಡಿದ್ದಾರೆ. ಹಿಂದುಳಿದ ವರ್ಗಗಳಿಗೆ ಶೇ 42ರಷ್ಟು ಮೀಸಲಾತಿ ನೀಡಬೇಕೆಂಬ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸನ್ನು ತಕ್ಷಣ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಜಾತಿ, ಉಪಜಾತಿಗಳನ್ನು ಆಡಳಿತಾತ್ಮಕವಾಗಿ ಕುಗ್ಗಿಸುವ ಷಡ್ಯಂತ್ರ ಸ್ವಾತಂತ್ರ್ಯ ಬಂದ ದಿನದಿಂದಲೂ ನಡೆದುಕೊಂಡು ಬಂದಿದೆ. ಅಹಿಂದ ಸಮುದಾಯಗಳ ಹಕ್ಕುಗಳಿಗಾಗಿ ಸಂಘಟನೆ ಶ್ರಮಿಸಲಿದೆ. ಎಸ್ಐಆರ್ ಮೂಲಕ ಮುಸ್ಲಿಂ ಸಮುದಾಯದ ಮತಗಳನ್ನು ಕಿತ್ತುಕೊಳ್ಳುವ ಸಂಚು ನಡೆಸಿದರೆ ಸರ್ಕಾರದ ವಿರುದ್ಧ ಹೋರಾಟ ರೂಪಿಸುತ್ತೇವೆ’ ಎಂದು ಎಚ್ಚರಿಸಿದರು.

ಕಾರ್ಯದರ್ಶಿ ವಾಸಪ್ಪ ಮಾಸ್ತಿಕಟ್ಟೆ, ಮುಖಂಡರಾದ ಇರೇಗೋಡು ಶ್ರೀಧರಮೂರ್ತಿ, ಪುತ್ತಬ್ಬ ಬೆಜ್ಜವಳ್ಳಿ, ಅಬೀಬ್ ಕುಡುಮಲ್ಲಿಗೆ, ಚಿಡುವ ಮಂಜುನಾಥ್, ಪ್ರಶಾಂತ್ ಕುಪ್ಪಳಿ, ರವಿ ಕುರುವಳ್ಳಿ, ರಮೇಶ್ ಬೆಕ್ಷೆ, ಕೋಣಂದೂರು ಅಬೂಬ್ಬಕ್ಕರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-42-1101492282

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.