ರಿಪ್ಪನ್ಪೇಟೆ: ‘ಬಿಜೆಪಿ ರಾಷ್ಟ್ರೀಯ ವ್ಯಾಪ್ತಿಯಲ್ಲಿ ಇನ್ನಷ್ಟು ಸದೃಢವಾಗಿ ಬೆಳೆಯಲು ಪಕ್ಷದ ಕೆಳಹಂತದ ಕಾರ್ಯಕರ್ತರ ಶ್ರಮ ಅವಿಸ್ಮರಣೀಯ’ ಎಂದು ಸಂಸದ ಬಿ.ವೈ. ರಾಘವೇಂದ್ರ ಅಭಿಪ್ರಾಯಪಟ್ಟರು.

ಇಲ್ಲಿನ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಗವಟೂರು–1 ಬೂತ್ ಅಧ್ಯಕ್ಷರ ಮನೆ ಅಂಗಳದಲ್ಲಿ ಸೋಮವಾರ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

‘ಬಿಜೆಪಿ ಕೇವಲ ರಾಜಕೀಯ ಪಕ್ಷವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ದೇಶದ ಅಭಿವೃದ್ಧಿ, ಸಾಂಸ್ಕೃತಿಕ ಮೌಲ್ಯಗಳು ಹಾಗೂ ರಾಷ್ಟ್ರಭಕ್ತಿಯ ಮಹಾನ್ ಚಳವಳಿಯಾಗಿ ಹೊರಹೊಮ್ಮಿದೆ’ ಎಂದರು.

‘ಪಕ್ಷದ ತತ್ವ, ಸಿದ್ಧಾಂತ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ದೇಶ ಜಾಗತಿಕ ಮಟ್ಟದಲ್ಲಿ ಹೊಸ ಹೆಗ್ಗುರುತು ಮೂಡಿಸಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ಅಭಿಪ್ರಾಯಪಟ್ಟರು.

‘ಕೆರೆಹಳ್ಳಿ ಮಹಾಶಕ್ತಿ ಕೇಂದ್ರವು ಸದಾ ಪಕ್ಷದ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಘಟಿತವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ಮಾಡಲಾಗಿದೆ’ ಎಂದು ಹೊಸನಗರ ಮಂಡಲ ಅಧ್ಯಕ್ಷ ಎನ್. ಸತೀಶ್ ಹೇಳಿದರು.

ಈ ವೇಳೆ ಪಕ್ಷದ ಐವರು ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.

ಪ್ರಮುಖರಾದ ಪದ್ಮಿನಿ ರಾವ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಟಿ. ಸುಂದರೇಶ್, ಪ್ರಧಾನ ಕಾರ್ಯದರ್ಶಿ ಕಟ್ಟೆ ಅರುಣ, ಸೇರಿ ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-42-923526324

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.