ಶಿವಮೊಗ್ಗ: ‘ಮಹಿಳೆಯರು ಮುಖ್ಯವಾಹಿನಿಗೆ ಬಂದು ಸಾಮಾಜಿಕ ಕ್ಷೇತ್ರಕ್ಕೆ ತಮ್ಮದೇ ಕೊಡುಗೆ ನೀಡಬೇಕು’ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ. ಶ್ರೀಕಾಂತ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದ ವೇಳೆ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸಿ ಅವರ ಏಳಿಗೆಗೆ ಶ್ರಮಿಸಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲೂ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ನೀಡಲಾಗಿದೆ’ ಎಂದರು.

‘ಮಹಿಳೆಯರು ಸಾಮಾಜಿಕ ಜಾಲತಾಣ ಬಳಸುವಾಗ ಜಾಗೃತರಾಗಿರಬೇಕು. ವೈಯಕ್ತಿಕ ಫೋಟೊ ಹಂಚಿಕೊಳ್ಳುವಾಗ ಎಚ್ಚರ ವಹಿಸಬೇಕು’ ಎಂದು ಸುರಭಿ ಮಹಿಳಾ ಮಂಡಳಿ ನಿರ್ದೇಶಕಿ ರೇಖಾ ಹೇಳಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಉದ್ಘಾಟಿಸಿದರು, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಶ್ವೇತಾ ಬಂಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಲಗೋಡು ರತ್ನಾಕರ್, ಕುವೆಂಪು ವಿ.ವಿ ಎನ್ಎಸ್ಎಸ್ ಸಂಯೋಜಕಿ ಶುಭಾ ಮರವಂತೆ, ಪುಷ್ಪಾ ಶಿವಕುಮಾರ್, ವಿಜಯಲಕ್ಷ್ಮಿ ಪಾಟೀಲ್, ಸ್ಟೆಲ್ಲಾ ಮಾರ್ಟಿನ್, ಭಾರತಿ ರಾಮಕೃಷ್ಣ, ಕವಿತಾ, ಯಮುನಾ ರಂಗೇಗೌಡ, ನೇತ್ರಾವತಿ, ಸುವರ್ಣ ನಾಗರಾಜ್, ವೇದಾವತಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-42-823663904

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.