ತ್ಯಾಗರ್ತಿ: ‘ತಾಲ್ಲೂಕಿನಲ್ಲಿ ಸಣ್ಣ ರೈತರಿಗೆ ಅನಾವಶ್ಯಕ ಕಿರುಕುಳ ನೀಡಲಾಗುತ್ತಿದೆ. ಇದಕ್ಕೆಲ್ಲಾ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವೈಫಲ್ಯ ಕಾರಣ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಸಾಗರ ತಾಲ್ಲೂಕಿನ ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸುಜಾತಾ ಎಂಬುವವರ 15 ಗುಂಟೆ ಜಮೀನು ತೆರವುಗೊಳಿಸಿದ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಶರಾವತಿ ಮುಳುಗಡೆ ಸಂತ್ರಸ್ತರು ತಮ್ಮ ಪೂರ್ವಜರ ಕಾಲದಿಂದಲೂ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಯಾರೋ ರಾಜಕೀಯ ಪುಡಾರಿ ಹೇಳಿದ ಮಾತು ಕೇಳಿ ಅವರಿಂದ ಜಮೀನು ಕಿತ್ತುಕೊಳ್ಳಲು ಮುಂದಾಗುವುದು ಅಕ್ಷಮ್ಯ ಅಪರಾಧ’ ಎಂದು ಕಿಡಿಕಾರಿದರು.

‘ಇದನ್ನು ಡಿಎಫ್ಒ ಮಾಡಿರಲು ಸಾಧ್ಯವಿಲ್ಲ. ಅವರ ಕೆಳಹಂತದ ಅಧಿಕಾರಿಗಳು ಮಾಡಿರಬೇಕು. ಈ ಘಟನೆ ಅವರ ಗಮನಕ್ಕೆ ಬಂದ ಕೂಡಲೇ ಯಾವ ಕ್ರಮ ಕೈಗೊಂಡಿದ್ದಾರೆ’ ಎಂದು ಪ್ರಶ್ನಿಸಿದರು.

ಸ್ಥಳದಲ್ಲಿಯೇ ಡಿಎಫ್ಒಗೆ ಕರೆ ಮಾಡಿದ ಹರತಾಳು ಹಾಲಪ್ಪ, ‘ಸ್ಥಳ ಪರಿಶೀಲನೆ ಮಾಡದೇ ಹೇಗೆ ತೆರವುಗೊಳಿಸಿದ್ದೀರಿ. ಬಡ ರೈತರ ಮೇಲೆ ಈ ರೀತಿಯ ದೌರ್ಜನ್ಯ ಸರಿಯೇ’ ಎಂದು ಪ್ರಶ್ನಿಸಿದರು. ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಜಿ.ಪಂ. ಮಾಜಿ ಸದಸ್ಯರಾದ ರತ್ನಾಕರ ಹೊನಗೋಡು, ಹಕ್ರೆ ಮಲ್ಲಿಕಾರ್ಜುನ, ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಲ್ಲಿಕಾ ಮಂಜುನಾಥ್, ಶಾಂತಪ್ಪ ಗೌಡ, ದೇವೇಂದ್ರಪ್ಪ ಯಲಕುಂದ್ಲಿ, ಕೃಷ್ಣಮೂರ್ತಿ ಹೊಸಂತೆ, ಶ್ರೀಧರ ಸಂಪಳ್ಳಿ ಹಾಗೂ ಹಲವು ಮುಖಂಡರು ಇದ್ದರು.

ತ್ಯಾಗರ್ತಿ: ‘ಮೂರು ಎಕರೆಯೊಳಗಿನ ಯಾವ ಸಾಗುವಳಿದಾರರಿಗೂ ತೊಂದರೆ ನೀಡಬಾರದು ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರ ಆದೇಶಿಸಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು 15 ಗುಂಟೆ ಜಮೀನು ತೆರವುಗೊಳಿಸಲು ಮುಂದಾಗಿದ್ದು ಖಂಡನೀಯ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ ಹೊನಗೋಡು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಇದು ಹೀಗೆ ಮುಂದುವರಿದರೆ ಪಕ್ಷದ ನಾಯಕರೆಲ್ಲರೂ ಸೇರಿ ಹೋರಾಟ ನಡೆಸುತ್ತೇವೆ. ಆ ಮೂಲಕ ಉತ್ತರ ನೀಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-42-364262609

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.