ನವದೆಹಲಿ: ರಾಜ್ಯ ಸರ್ಕಾರವು ಉಚಿತವಾಗಿ ಭೂಮಿ ಹಾಗೂ ಯೋಜನಾ ವೆಚ್ಚದ ಶೇ 50 ಮೊತ್ತ ಭರಿಸಲು ನಿರಾಕರಿಸಿದ ಕಾರಣಕ್ಕೆ ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.

ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಕೇಳಿರುವ ಪ್ರಶ್ನೆಗೆ ಬುಧವಾರ ಉತ್ತರ ನೀಡಿರುವ ಅವರು, ʼ79 ಕಿ.ಮೀ. ಉದ್ದದ ಈ ಮಾರ್ಗಕ್ಕೆ ₹832 ಕೋಟಿ ವೆಚ್ಚವಾಗಲಿದೆ. ಈ ಮಾರ್ಗ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದೆ. ಯೋಜನೆಗೆ ಅಗತ್ಯವಿರುವ 488 ಹೆಕ್ಟೇರ್ ಜಾಗವನ್ನು ರಾಜ್ಯ ಸರ್ಕಾರ ಉಚಿತವಾಗಿ ಸ್ವಾಧೀನಪಡಿಸಿ ಹಸ್ತಾಂತರಿಸಬೇಕು ಹಾಗೂ ಯೋಜನಾ ಮೊತ್ತದ ಶೇ ೫೦ ಭರಿಸಬೇಕು ಎಂದು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಇದೀಗ, ರಾಜ್ಯ ಸರ್ಕಾರ ಈ ಒಪ್ಪಂದದಿಂದ ಹಿಂದಕ್ಕೆ ಸರಿದಿದೆʼ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.