ಶಿವಮೊಗ್ಗ: ‘ಮಧ್ಯ ಕರ್ನಾಟಕದ ಭಾಗವಾಗಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ದಿನೇ ದಿನೇ ಬೆಂಬಲ ಹೆಚ್ಚಳವಾಗುತ್ತಿದೆ. ಮಂಗಳವಾರ ಧರಣಿ ಸ್ಥಳಕ್ಕೆ ಪ್ರತ್ಯೇಕವಾಗಿ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೋರಾಟಕ್ಕೆ ರಾಜಕೀಯ ಬಲ ತುಂಬಿದರು.

ಬಿಜೆಪಿ ಹಾಗೂ ರಾಷ್ಟ್ರಭಕ್ತರ ಬಳಗದಿಂದ ಹೋರಾಟಕ್ಕೆ ಬೆಂಬಲ ಸೂಚಿಸಿದ ಇಬ್ಬರೂ ನಾಯಕರಿಗೆ ಹೋರಾಟದ ಮುಂದಿನ ರೂಪುರೇಷೆಯ ಬಗ್ಗೆ ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ಸ್ವಾಮಿ ಹಾಗೂ ಹೋರಾಟ ಸಮಿತಿಯ ಗೌರವಾಧ್ಯಕ್ಷ ಕೆ.ಬಸಪ್ಪಗೌಡ ಮಾಹಿತಿ ನೀಡಿದರು.

ಈ ವೇಳೆ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ‘ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಒತ್ತಾಯದ ದನಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ನ್ಯಾಯ ಎಲ್ಲರಿಗೂ ಸುಲಭವಾಗಿ ಸಿಗಬೇಕು ಎಂಬ ಸಂವಿಧಾನದ ಆಶಯ ಇದರ ಹಿಂದೆ ಇದೆ. ಹೀಗಾಗಿ ಶಿವಮೊಗ್ಗಕ್ಕೆ ಪೀಠ ಪಡೆಯುವುದು ನಮ್ಮ ಹಕ್ಕು’ ಎಂದು ಪ್ರತಿಪಾದಿಸಿದರು.

‘ಮಲೆನಾಡು, ಮಧ್ಯ ಕರ್ನಾಟಕ ಭಾಗದ ಲಕ್ಷಾಂತರ ಜನರ ನ್ಯಾಯ ಪ್ರಾಪ್ತಿಯ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗೂಡೋಣ’ ಎಂದು ಸಲಹೆ ನೀಡಿದ ಅವರು, ಭೌಗೋಳಿಕ ಸವಾಲುಗಳನ್ನು ಕಡೆಗಣಿಸಿ ಮಂಗಳೂರು ಪೀಠಕ್ಕೆ ಶಿವಮೊಗ್ಗ ಜಿಲ್ಲೆಯನ್ನು ಸೇರಿಸುವ ಪ್ರಸ್ತಾಪಕ್ಕೆ ತೀವ್ರ ಅಸಮ್ಮತಿ ಸೂಚಿಸಿದರು.

‘ಉತ್ತರ ಕರ್ನಾಟಕದ ಜನರಿಗೆ ಧಾರವಾಡದಲ್ಲಿ, ಕಲ್ಯಾಣ ಕರ್ನಾಟಕಕ್ಕಾಗಿ ಕಲಬುರಗಿಯಲ್ಲಿ ಹೈಕೋರ್ಟ್ ಪೀಠಗಳಿವೆ. ಆದರೆ ನಾಡಿನ ಹೃದಯಭಾಗ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರು ಸಣ್ಣಪುಟ್ಟ ವ್ಯಾಜ್ಯಗಳಿಗೂ 300 ಕಿ.ಮೀ. ದೂರದ ಬೆಂಗಳೂರಿಗೆ ಅಲೆಯುವ ಪರಿಸ್ಥಿತಿ ಇದೆ. ಶಿವಮೊಗ್ಗವು ಕೇವಲ ಒಂದು ಜಿಲ್ಲೆಯಲ್ಲ. ಇದು ಚಿತ್ರದುರ್ಗ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಬೆಸೆಯುವ ಮಧ್ಯಬಿಂದು. ಹಾಗಾಗಿ ಈ ಭಾಗದ ಲಕ್ಷಾಂತರ ಜನರ ನ್ಯಾಯದ ಅಹವಾಲು ಸಲ್ಲಿಸಲು ಶಿವಮೊಗ್ಗವೇ ಆಶಾಕಿರಣ’ ಎಂದು ತಿಳಿಸಿದರು.

‘ಮಳೆಗಾಲದಲ್ಲಿ ಆಗುಂಬೆ, ಹುಲಿಕಲ್, ಶಿರಾಡಿ ಅಥವಾ ಚಾರ್ಮಡಿ ಘಾಟ್ಗಳಲ್ಲಿ ಭೂಕುಸಿತ ಮತ್ತು ರಸ್ತೆ ಮುಳುಗಡೆಯಂತಹ ಪರಿಸ್ಥಿತಿ ಸಾಮಾನ್ಯ. ಇಂತಹ ಪರಿಸ್ಥಿತಿಯಲ್ಲಿ ಜೀವದ ಹಂಗು ತೊರೆದು ಜನ ಸಾಮಾನ್ಯರು ನ್ಯಾಯ ಪಡೆಯಲು ಹೋಗಬೇಕೇ? ಇದೇ ಪೀಠ ಸ್ಥಾಪನೆಯ ಉದ್ದೇಶವೇ?’ ಎಂದು ಪ್ರಶ್ನಿಸಿದ ಅವರು, ಇದೇ ಕಾರಣಕ್ಕಾಗಿ ಶಿವಮೊಗ್ಗ, ಹಾಸನ, ಮಡಿಕೇರಿ ಮತ್ತು ಚಿಕ್ಕಮಗಳೂರು ವಕೀಲರ ಸಂಘಗಳು ಮಂಗಳೂರಿನಲ್ಲಿ ಹೈಕೋರ್ಟ್ ಪೀಠದ ಪ್ರಸ್ತಾವವನ್ನು ಒಮ್ಮತದಿಂದ ವಿರೋಧಿಸಿ ಮುಖ್ಯ ನ್ಯಾಯಮೂರ್ತಿಗೆ ಈಗಾಗಲೇ ಮನವಿ ಸಲ್ಲಿಸಿವೆ’ ಎಂಬುದನ್ನು ಪ್ರಸ್ತಾಪಿಸಿದರು.

ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಪರಿಷತ್ ಮಾಜಿ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ. ಜಗದೀಶ್, ಪಕ್ಷದ ಮುಖಂಡರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-42-1401874839

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.