ಶಿವಮೊಗ್ಗ: ‘ರಾಜ್ಯದಲ್ಲಿ ವಸತಿರಹಿತ ಅಲೆಮಾರಿಗಳಿಗೆ 3,200 ಮನೆಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಅವರಿಗೆ ಜಾತಿ ಪ್ರಮಾಣ ಪತ್ರ, ಇತರೆ ಪೂರಕ ದಾಖಲೆಗಳನ್ನು ಸರಳೀಕರಿಸಿ ಕೊಡುವಂತೆ ರಾಜ್ಯದ ಎಲ್ಲ ತಹಶೀಲ್ದಾರ್ಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪರಿಶಿಷ್ಟ ಜಾತಿ, ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಮನೆಗಳಿಗೆ ಆಯಾ ಜಿಲ್ಲಾಡಳಿತದಿಂದ ಬೇಡಿಕೆ ಬರಬೇಕಿದೆ. ಅಲೆಮಾರಿಗಳಲ್ಲಿ ಸಮರ್ಪಕ ದಾಖಲೆಗಳಿಲ್ಲದ ಕಾರಣ ಬೇಡಿಕೆ ಸಲ್ಲಿಕೆಯಾಗಿಲ್ಲ. ತಹಶೀಲ್ದಾರ್ಗಳು ಇಚ್ಛಾಶಕ್ತಿಯಿಂದ ಕೆಲಸ ಮಾಡಿ ಅವರಿಗೆ ಅನುಕೂಲ ಮಾಡಿಕೊಡಿ’ ಎಂದು ಹೇಳಿದರು.

‘ಮನೆಗಳು ಮಾತ್ರವಲ್ಲ ಅಲೆಮಾರಿಗಳಿಗೆ ಯಾವುದೇ ಸರ್ಕಾರಿ ಸೌಲಭ್ಯ ಪಡೆಯಲು ಮುಖ್ಯವಾಗಿ ಆಧಾರ್, ಜಾತಿ ಪ್ರಮಾಣ ಪತ್ರದಂತಹ ದಾಖಲೆಗಳು ಬೇಕು. ಅವುಗಳನ್ನು ಒದಗಿಸಲು ಎಲ್ಲ ತಹಶೀಲ್ದಾರರಿಗೂ ವಿಶೇಷ ಶಿಬಿರ ಮಾಡಿ ತರಬೇತಿ ನೀಡಲಾಗಿದೆ. ಸ್ಥಾನಿಕ ಚೌಕಾಸಿ ಮಾಡಿ ಜಾತಿ ಪ್ರಮಾಣ ಪತ್ರ ಒದಗಿಸಲು ಸೂಚಿಸಲಾಗಿದೆ’ ಎಂದರು.

‘ಶಿವಮೊಗ್ಗ ತಾಲ್ಲೂಕಿನ ಗೋಂದಿ ಚಟ್ನಹಳ್ಳಿ, ಕಲ್ಲಾಪುರ, ಮಲ್ಲಿಗೇನಹಳ್ಳಿ, ಶಿವಮೊಗ್ಗದ ಎಂಆರ್ಎಸ್ ಭಾಗದಲ್ಲಿ ವಾಸವಿರುವ ಸುಡುಗಾಡು ಸಿದ್ದ, ಹಂದಿಜೋಗಿ, ಗೋಸಂಗಿ, ಶಿಳ್ಳೇಕ್ಯಾತ, ಕೊರಚ ಸಮುದಾಯದವರ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ಹಾಗೂ ಅವರು ಶಾಶ್ವತವಾಗಿ ನೆಲೆ ನಿಲ್ಲಲು ವಸತಿ, ನಿವೇಶನ ಕೊಡಿಸಲು ಕ್ರಮ ವಹಿಸಲಾಗುತ್ತಿದೆ’ ಎಂದು ಹೇಳಿದರು.

‘ತೀರ್ಥಹಳ್ಳಿಯಲ್ಲಿ ದೊಂಬರು, ಸುಡುಗಾಡು ಸಿದ್ಧರು ಹೊಳೆದಂಡೆಯಲ್ಲಿ ನೆಲೆಸಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದಿಂದ ಅವರಿಗೆ ವಸತಿ ಸವಲತ್ತು ಮಂಜೂರು ಮಾಡಲಾಗಿದೆ. ಶೀಘ್ರದಲ್ಲೇ ಹಕ್ಕುಪತ್ರಗಳ ವಿತರಣೆ ಮಾಡಲಾಗುವುದು’ ಎಂದರು.

‘ಭದ್ರಾವತಿಯಲ್ಲಿ ಮಳೆಯಿಂದ ಶಿಳ್ಳೇಕ್ಯಾತರು ವಾಸವಿದ್ದ ಟೆಂಟ್ ಬಿದ್ದು ಬಾಲಕಿ ಮೃತಪಟ್ಟಿದ್ದಾಳೆ. ಆಕೆಯ ಕುಟುಂಬಕ್ಕೆ ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ಕೊಡಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಎಸ್ಪಿ ರಮೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಿ. ಮಲ್ಲೇಶಪ್ಪ, ನಿಗಮದ ಸಮನ್ವಯಕಾರ ಆನಂದಕುಮಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-42-403439810

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.