ಹೊಳೆಹೊನ್ನೂರು (ಶಿವಮೊಗ್ಗ): ‘ಮಹಿಳೆಯರು ಇತ್ತೀಚಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದು, ಕುಟುಂಬಗಳು ಒಡೆಯುತ್ತಿವೆ. ಜನಹಿತಕ್ಕೆ ವಿರುದ್ಧವಾದ ಕಾಯ್ದೆ ಹಿಂಪಡೆಯಬೇಕು’ ಎಂದು ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಯಡೇಹಳ್ಳಿ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಧರ್ಮಸಭೆ ಉದ್ದೇಶಿಸಿ ಅವರು ಮಾತನಾಡಿದರು.

‘ತಂದೆ–ತಾಯಿ, ಅಣ್ಣ–ತಮ್ಮಂದಿರು, ಸಹೋದರಿ ಮದುವೆಗಾಗಿ ಸಾಲ ಮಾಡಿ, ಆಸ್ತಿ ಮಾರಾಟ ಮಾಡಿರುತ್ತಾರೆ. ಆದರೂ ಉಳಿದ ಆಸ್ತಿಯಲ್ಲಿ ಪಾಲು ಕೇಳುವುದು ತಪ್ಪು. ಜನಪ್ರತಿನಿಧಿಗಳು ಹಾಗೂ ಸರ್ಕಾರ ಈ ಬಗ್ಗೆ ಚಿಂತಿಸಿ, ಕಾನೂನು ತೆಗೆದುಹಾಕಬೇಕು’ ಎಂದು ಅಭಿಪ್ರಾಯಪಟ್ಟರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-44-1438213868

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.