ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶೋಭಾ ವಿರುದ್ಧ ಕಾಂಗ್ರೆಸ್‌ ಅಪಪ್ರಚಾರ: ಬಿಜೆಪಿ ದೂರು

Published 25 ಏಪ್ರಿಲ್ 2024, 15:39 IST
Last Updated 25 ಏಪ್ರಿಲ್ 2024, 15:39 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಚಿತ್ರ ಬಳಸಿ ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದ್ದು, ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

‘ಕರಪತ್ರಗಳಲ್ಲಿ ಶೋಭಾ ಮತ್ತು ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್‌ಗೌಡ ಅವರ ಚಿತ್ರಗಳನ್ನು ಹಾಕಿ ನಿಮ್ಮ ಮತ ಯಾರಿಗೆ ಎಂಬ ತಲೆ ಬರಹದ ಅಡಿಯಲ್ಲಿ ಶೋಭಾ ಕುರಿತು ಆಧಾರ ರಹಿತ ಆರೋಪಗಳನ್ನು ಮಾಡಿ ಕ್ಷೇತ್ರದಲ್ಲಿ ಕನ್ನಡ ಮತ್ತು ಇಂಗ್ಲಿಷ್‌ ದಿನ ಪತ್ರಿಕೆಗಳ ಮೂಲಕ ವಿತರಿಸಲಾಗಿದೆ’ ಎಂದು ದೂರಿನಲ್ಲಿ ಬಿಜೆಪಿ ತಿಳಿಸಿದೆ.

‘ನಮ್ಮ ಪಕ್ಷದ ಅಭ್ಯರ್ಥಿ ವಿರುದ್ಧ ವಿರೋಧಿ ಭಾವನೆ ಮೂಡಿಸುವ ಮೂಲಕ ಚುನಾವಣೆಯಲ್ಲಿ ಅಕ್ರಮ ಲಾಭ ಪಡೆಯುವ ದುರುದ್ದೇಶ ಹೊಂದಿದ್ದಾರೆ. ಇದು ಮಾದರಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗಿದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಮನವಿ ಮಾಡಿದೆ.

ಅಲ್ಲದೆ, ಜೆ.ಪಿ.ನಗರದ 3 ನೇ ಹಂತದಲ್ಲಿರುವ ಸೇಂಟ್‌ ಮಾರ್ಕ್ಸ್‌ ಶಾಲೆಗೆ ಮತದಾನದ ದಿನ ರಜೆ ನೀಡಿಲ್ಲ. ಇದರಿಂದ ಶಾಲೆಯ ಸಿಬ್ಬಂದಿಗೆ ಮತದಾನ ಮಾಡಲು ಸಾಧ್ಯವಾಗುತ್ತಿಲ್ಲ. ಎಲ್ಲ ಖಾಸಗಿ ಕಚೇರಿಗಳಿಗೆ ವೇತನ ಸಹಿತ ರಜೆ ನೀಡಬೇಕು ಎಂಬ ನಿಯಮವೇ ಇದೆ. ಆದ್ದರಿಂದ ಶಾಲೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಬಿಜೆಪಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT