ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕ್ ‍ಪರ ಘೋಷಣೆ ಆರೋಪ: ಎನ್‌ಐಎ ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ

Published 28 ಫೆಬ್ರುವರಿ 2024, 15:35 IST
Last Updated 28 ಫೆಬ್ರುವರಿ 2024, 15:35 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭಾ ಸದಸ್ಯ ಸೈಯದ್‌ ನಾಸಿರ್‌ ಹುಸೇನ್‌ ವಿಜಯೋತ್ಸವ ಸಂಭ್ರಮಾಚರಣೆಯ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ಆರೋಪದ ಬಗ್ಗೆ ಎನ್‌ಐಎ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಬುಧವಾರ ಮನವಿ ಮಾಡಿದ್ದಾರೆ.

‘ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಕಾಂಗ್ರೆಸ್‌ ಜತೆಗೆ ಗುರುತಿಸಿಕೊಂಡಿದ್ದಾರೆ. ಮಂಗಳವಾರದ ಘಟನೆಯಲ್ಲಿ ಅವರು ಭಾಗಿಯಾಗಿರುವ ಅನುಮಾನ ಇದೆ. ವಿಧಾನಸೌಧದಲ್ಲಿ ಭದ್ರತಾ ಲೋಪ ಆಗಿದೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯಬೇಕಿದೆ. ಹಾಗಾಗಿ, ಎನ್‌ಐಎಗೆ ವಹಿಸುವುದು ಸೂಕ್ತ’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT