ಬೆಳಗಾವಿ: ‘ಜೊತೆಯಲ್ಲಿ ಕರೆದುಕೊಂಡು ಬಂದು ಈಗ ಬಿಟ್ಟು ಹೋಗುತ್ತೀರಾ?’ ಎಂದು ಸಂಸದೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖಂಡರು ಹಾಗೂ ಅಧಕಾರಿಗಳ ಸಮ್ಮುಖದಲ್ಲಿ ಪ್ರಶ್ನಿಸಿದ ಪ್ರಸಂಗ ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಭಾನುವಾರ ನಡೆಯಿತು.

ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಪುತ್ರಿ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಹುಬ್ಬಳ್ಳಿಗೂ ಅವರೊಂದಿಗೆ ವಿಶೇಷ ವಿಮಾನದಲ್ಲಿ ತೆರಳಲು ಅವಕಾಶ ಸಿಗದಿದ್ದುದ್ದಕ್ಕೆ ಸಿಟ್ಟಾಗಿದ್ದರು. ಪೊಲೀಸರಿಂದ ಗೌರವವಂದನೆ ಸ್ವೀಕರಿಸುವ ವೇಳೆ ನಡೆದ ಘಟನೆಯಿಂದ ಮುಖ್ಯಮಂತ್ರಿ ಮುಜುಗರಕ್ಕೆ ಒಳಗಾಗಬೇಕಾಯಿತು.

ತಮ್ಮೊಂದಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕರೆದುಕೊಂಡು ಹೋಗುವ ಇರಾದೆ ಮುಖ್ಯಮಂತ್ರಿಯದಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ ‘ನನ್ನ ಬದಲು ನೀವೇ ವಿಮಾನದಲ್ಲಿ ಹೋಗಿ’ ಎಂದು ತಿಳಿಸಿದ ಪ್ರಸಂಗವೂ ನಡಯಿತು.

ಕೊನೆಗೆ ಪರಿಷತ್ ಸದಸ್ಯರವಿಕುಮಾರ್ ಬೇರೊಂದು ವಿಮಾನದಲ್ಲಿ ಬೆಂಗಳೂರಿಗೆ ನಿರ್ಗಮಿಸಿದರು. ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿಯೊಂದಿಗೆ ಶೋಭಾ, ಬೊಮ್ಮಾಯಿ ಹುಬ್ಬಳ್ಳಿಗೆ ಪ್ರಯಾಣಿಸಿದರು. ಬೆಂಗಳೂರಿನಿಂದ ಬರುವಾಗ ರವಿಕುಮಾರ್ ಜೊತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.