ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

370ನೇ ವಿಧಿ ರದ್ದತಿಗೆ ‘ಮುಖರ್ಜಿ’ಯೇ ಪ್ರೇರಣೆ: ವಿಜಯೇಂದ್ರ

Published 6 ಜುಲೈ 2024, 16:04 IST
Last Updated 6 ಜುಲೈ 2024, 16:04 IST
ಅಕ್ಷರ ಗಾತ್ರ

ಬೆಂಗಳೂರು: ಕಾಶ್ಮೀರವನ್ನು ಭಾರತದಲ್ಲೇ ಉಳಿಸಲು ಹಾಗೂ ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ನೀಡುವುದರ ವಿರುದ್ಧ ಶ್ಯಾಮಪ್ರಸಾದ್‌ ಮುಖರ್ಜಿ ನಿರಂತರ ಹೋರಾಟ ಮಾಡಿದ್ದರು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಶ್ಯಾಮಪ್ರಸಾದ್‌ ಮುಖರ್ಜಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಶ್ಮೀರಕ್ಕಾಗಿಯೇ ಅವರ ಬಲಿದಾನವೂ ಆಯಿತು. ಮುರಳಿ ಮನೋಹರ ಜೋಷಿ ಅವರ ನೇತೃತ್ವದಲ್ಲಿ ಕಾಶ್ಮೀರದ ಲಾಲ್‌ ಚೌಕದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿತ್ತು. ಪಕ್ಷದ ನಾಯಕರಾದ ಬಿ.ಎಸ್‌. ಯಡಿಯೂರಪ್ಪ, ಅನಂತಕುಮಾರ್‌ ಮತ್ತಿತರ ನಾಯಕರು ಭಾಗವಹಿಸಿದ್ದರು ಎಂದು ಸ್ಮರಿಸಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರ ಇಚ್ಛಾಶಕ್ತಿಯ ಫಲವಾಗಿ ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ರದ್ದು ಮಾಡಲಾಗಿದೆ. ಇಂತಹ ದಿಟ್ಟ ಕೆಲಸಕ್ಕೆ ಶ್ಯಾಮಪ್ರಸಾದ್ ಮುಖರ್ಜಿ ಅವರೇ ಪ್ರೇರಣೆ ಎಂದರು.

ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್‍ದಾಸ್ ಅಗರ್‌ವಾಲ್‌, ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಶಾಸಕರಾದ ಶರಣು ಸಲಗರ, ಶೈಲೇಂದ್ರ ಬೆಲ್ದಾಳೆ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಮಂಜುಳಾ ಉಪಸ್ಥಿತರಿದ್ದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT