ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ 7ನೇ ಪುಣ್ಯ ಸಂಸ್ಮರಣೋತ್ಸವ ಬುಧವಾರ (ಜ.21) ನಡೆಯಲಿದ್ದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭಾಗವಹಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಪುಣ್ಯ ಸ್ಮರಣೋತ್ಸವ ಆರಂಭವಾಗಲಿದೆ. ಉಪರಾಷ್ಟ್ರಪತಿ ಸುಮಾರು ಒಂದು ತಾಸು ಮಠದಲ್ಲಿ ಕಳೆಯಲಿದ್ದಾರೆ.

ಸಂಸ್ಮರಣೋತ್ಸವಕ್ಕೆ ಮಠದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಡಿನ ವಿವಿಧೆಯಿಂದ ಬರುವ ಸಾವಿರಾರು ಭಕ್ತರಿಗೆ ಬೆಳಗ್ಗೆಯಿಂದ ರಾತ್ರಿವರೆಗೂ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

ಬುಧವಾರ ಬೆಳಗಿನ ಜಾವ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಮಹಾರುದ್ರಭಿಷೇಕದ ಮೂಲಕ ಸಂಸ್ಮರಣೋತ್ಸವ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಇಡೀ ದಿನ ಧಾರ್ಮಿಕ ಕಾರ್ಯಗಳು ನೆರವೇರಲಿದ್ದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಗುರುವಿಗೆ ನಮಿಸುವ ಮೂಲಕ ಶಿವಕುಮಾರ ಸ್ವಾಮೀಜಿಯನ್ನು ಸ್ಮರಿಸಲಿದ್ದಾರೆ.

ರಾಜ್ಯಪಾಲ ಥಾವರಚಂದ್ ಗೆಹಲೋತ್, ಮಧುಸೂದನ್ ಸಾಯಿ ಗ್ಲೋಬಲ್ ಹ್ಯುಮಾನಿಟೇರಿಯನ್ ಮಿಷನ್ ಸಂಸ್ಥಾಪಕ ಮಧುಸೂದನ ಸಾಯಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಚಿವ ಜಿ.ಪರಮೇಶ್ವರ ಇತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.