ಬೆಂಗಳೂರು: 2028ರಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೆಆರ್ಎಸ್ಗೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆಯಲ್ಲಿ ಅವರು ಮಾತನಾಡಿದರು.
.ಬಂಡೆ ರೀತಿ ನಮ್ಮ ಸರ್ಕಾರ ಭದ್ರ: ಸಿದ್ದರಾಮಯ್ಯ, ಡಿಕೆಶಿ ಒಗ್ಗಟ್ಟು ಪ್ರದರ್ಶನ.
ನಮ್ಮ ಸರ್ಕಾರ ಬಿದ್ದುಹೋಗುತ್ತದೆ ಎಂದು ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರುತ್ತದೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು ನುಡಿದರು.

ನಮ್ಮ ಸರ್ಕಾರ ನೀರಾವರಿಗೆ ₹ 25 ಸಾವಿರ ಕೋಟಿ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ ಎಂದು ಪ್ರಶ್ನಿಸಿದರು.
.ನಮ್ಮ ಶಾಸಕರೆಲ್ಲ ಒಗ್ಗಟ್ಟಾಗಿದ್ದೇವೆ, ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ: RVD.
ಸೋತ ಗಿರಾಕಿಗಳು ನನಗೂ, ಶಿವಕುಮಾರ್ಗೂ ಸರಿ ಇಲ್ಲ ಎಂದು ಬುರುಡೆ ಬಿಡುತ್ತಿದ್ದಾರೆ. ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ, ಗಟ್ಟಿಯಾಗಿ ಇದ್ದೇವೆ. ನಮ್ಮ ಸರ್ಕಾರವೂ ಐದು ವರ್ಷ ಗಟ್ಟಿಯಾಗಿ ಇರುತ್ತದೆ. 2028ರಲ್ಲೂ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು ನಾಡಿನ ಜನರಿಗೆ ಉತ್ತರಿಸಬೇಕು. ದಿವಾಳಿ ಆಗಿದ್ದರೆ 25 ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.
.Karnataka Politics | ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದ ಮಾಧುಸ್ವಾಮಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.