ಬೆಂಗಳೂರು: ‘ಎಐಸಿಸಿ ಒಬಿಸಿ ಸಮಿತಿ ಅಧ್ಯಕ್ಷರಾಗಿ ನನ್ನನ್ನು ನೇಮಿಸಿರುವ ಬಗ್ಗೆ ನನಗೆ ಗೊತ್ತಿಲ್ಲ. ಜವಾಬ್ದಾರಿ ಕೊಟ್ಟಾಗ ಬಿಟ್ಟು ಓಡಿ ಹೋಗಬೇಕೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಎಐಸಿಸಿ ಒಬಿಸಿ ವಿಭಾಗದ ಅಧ್ಯಕ್ಷರು ರಾಜ್ಯದಲ್ಲಿ ಸಭೆ ಆಯೋಜಿಸುವಂತೆ ಹೇಳಿರುವುದನ್ನು ಬಿ.ಕೆ. ಹರಿಪ್ರಸಾದ್ ಅವರು ಪತ್ರ ಬರೆದು ತಿಳಿಸಿದ್ದರು. ಆ ಸಭೆಯನ್ನು ಇದೇ 15ಕ್ಕೆ ಮಾಡಲು ವ್ಯವಸ್ಥೆ ಮಾಡಿದ್ದೇನೆ. ಎಐಸಿಸಿ ಒಬಿಸಿ ಸಮಿತಿ ಅಧ್ಯಕ್ಷರಾಗಿ ನೇಮಿಸಿರುವ ಬಗ್ಗೆ ಹೈಕಮಾಂಡ್ ಬಳಿ ಮಾತನಾಡುತ್ತೇನೆ’ ಎಂದರು.

‘ಜವಾಬ್ದಾರಿಯನ್ನು ಸ್ವೀಕರಿಸುತ್ತೀರಾ’ ಎಂಬ ಪ್ರಶ್ನೆಗೆ, ‘ಜವಾಬ್ದಾರಿ ಕೊಟ್ಟಾಗ ಬಿಟ್ಟು ಓಡಿ ಹೋಗಬೇಕೇ? ನಾನೇನು ಅದನ್ನು ಕೇಳಿಲ್ಲ. ಅವರು ಘೋಷಣೆ ಮಾಡಿದ್ದಾರೆ. ಹೈಕಮಾಂಡ್ ಬಳಿ ಮಾತನಾಡುತ್ತೇನೆ. ಇದು ರಾಷ್ಟ್ರ ರಾಜಕಾರಣ ಅಲ್ಲ. ಯಾವ ಹುದ್ದೆ ಕೊಟ್ಟಿದ್ದಾರೆ ಎಂಬುದು ನನಗೆ ಗೊತ್ತಿಲ್ಲ’ ಎಂದರು.

‘ರಸ್ತೆ ಅಭಿವೃದ್ಧಿ ಆಗಬೇಕಾದರೆ ಗ್ಯಾರಂಟಿ ತೆಗೆದುಕೊಳ್ಳುವುದು ಬಿಡಿ’ ಎಂಬ ಶಾಸಕ ಬಸವರಾಜ ರಾಯರಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಗ್ಯಾರಂಟಿ ಯೋಜನೆಯನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಎಲ್ಲ ಜಾತಿಯ ಬಡವರಿಗೆ ಮಾಡಿರುವಂಥ ಕಾರ್ಯಕ್ರಮ. ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕಾರ್ಯಕ್ರಮ. ಪ್ರತಿ ಶಾಸಕರಿಗೆ ರಸ್ತೆ, ಸೇತುವೆ ಕಾಮಗಾರಿಗಳಿಗಾಗಿ ಈ ಬಾರಿ ಸ್ವಲ್ಪ ಹಣ ಕೊಡುತ್ತಿದ್ದೇವೆ. ಬಿಜೆಪಿ, ಜೆಡಿಎಸ್ ಶಾಸಕರಿಗೂ ಕೊಡುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.