ಬೆಂಗಳೂರು: ‘ಅಂಬೇಡ್ಕರ್ ಅವರು ಹಿಂದೂ ಧರ್ಮದ ಸುಧಾರಣೆಗಾಗಿ ಬಹಳ ಪ್ರಯತ್ನ ಮಾಡಿದರು. ಆದರೆ ಕಡೆಗೆ ಅದು ಕೈಗೂಡದೆ ಹಿಂದೂ ಧರ್ಮವನ್ನು ತ್ಯಜಿಸಿದರು. ಅಸಮಾನತೆಗೆ ಕಾರಣವಾದ ಮನುವಾದವನ್ನು ತಿರಸ್ಕರಿಸಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ‘ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಜಾತಿ ವ್ಯವಸ್ಥೆ ಇರುವವರೆಗೂ ಅಸ್ಪೃಶ್ಯತೆ ಇರುತ್ತದೆ. ಸಾಮಾಜಿಕ, ಆರ್ಥಿಕ ಅಸಮಾನತೆ ಇರುವವರೆಗೆ ಜಾತೀಯತೆ ಇರಲಿದೆ ಎಂದು ಅಂಬೇಡ್ಕರ್ ಸ್ಪಷ್ಟವಾಗಿ ಹೇಳಿದ್ದರು. ಅವರು, ಎಲ್ಲಾ ದಮನಿತರ, ಪರಿಶಿಷ್ಟ ವರ್ಗಗಳ, ಶೋಷಿತರ, ಅವಕಾಶ ವಂಚಿತ ಜನರ ಪರವಾಗಿ ತಮ್ಮ ಜೀವನದುದ್ದಕ್ಕೂ ಹೋರಾಟವನ್ನು ಮಾಡಿದ್ದರು. ದಲಿತರ ಪರ ಮಾತ್ರವಲ್ಲದೇ ಅವಕಾಶ ವಂಚಿತರ, ದೌರ್ಜನ್ಯಕ್ಕೆ ಒಳಗಾದ ಎಲ್ಲರ ಪರವಾಗಿ ಹೋರಾಟ ಮಾಡಿದ್ದರು’ ಎಂದರು.

‘ಅಂಬೇಡ್ಕರ್ ಅವರು ಹೇಳಿರುವಂತೆ ಎಲ್ಲ ಸಂಕೋಲೆಗಳಿಂದ ವಿಮುಕ್ತರಾಗಲು ಶಿಕ್ಷಣ ಒಂದೇ ಪ್ರಬಲ ಅಸ್ತ್ರ. ಸಾಮಾಜಿಕ, ಆರ್ಥಿಕ ಶಕ್ತಿ ಎಲ್ಲರಿಗೂ ದೊರಕಿದಾಗ ಮಾತ್ರ ಸ್ವಾವಲಂಬನೆ ಸಾಧ್ಯ’ ಎಂದು ಹೇಳಿದರು.

‘ವೈಜ್ಞಾನಿಕ ಶಿಕ್ಷಣ ದೊರೆಯದಿದ್ದರೆ ಸಮ ಸಮಾಜದ ನಿರ್ಮಾಣ ಅಸಾಧ್ಯ. ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಮಾಜಿಕ, ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದು, ಸಮ ಸಮಾಜದ ನಿರ್ಮಾಣಕ್ಕೆ ಸರ್ಕಾರ ಮಾಡುತ್ತಿರುವ ಪ್ರಾಮಾಣಿಕ ಪ್ರಯತ್ನವಾಗಿದೆ’ ಎಂದರು.

‘ಸರ್ಕಾರ ನಡೆಸುವ ವಸತಿ ಶಾಲೆಗಳಲ್ಲಿ ಶೇ 97.22ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ್ದಾರೆ. ಇದು ಸರ್ಕಾರದ ಹೆಗ್ಗಳಿಕೆ’ ಎಂದು ಸಿದ್ದರಾಮಯ್ಯ ಹೇಳಿದರು.

ಸಮಾಜ ಕಲ್ಯಾಣ ಸಚಿವ ಸಚಿವ ಎಚ್.ಸಿ ಮಹದೇವಪ್ಪ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್ನಲ್ಲಿ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕರಾದ ರಿಜ್ವಾನ್ ಅರ್ಷದ್, ಎಸ್.ಎಲ್. ಭೋಜೇಗೌಡ, ಗೋವಿಂದರಾಜು, ಮಾಜಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಎಚ್. ಆಂಜನೇಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.