ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತಿ ಡಿ.ಎಸ್. ನಾಗಭೂಷಣ ನಿಧನ: ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರಿಂದ ಸಂತಾಪ

ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಿ.ಎಸ್.ನಾಗಭೂಷಣ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಡಿ.ಎಸ್.ನಾಗಭೂಷಣ ಅವರು ಗುರುವಾರ ನಿಧನರಾಗಿದ್ದಾರೆ.

‘ಅನ್ಯಾಯ,‌ ಅಸಮಾನತೆ ಮತ್ತು ಆತ್ಮವಂಚಕ ನಡವಳಿಕೆಗಳ ವಿರುದ್ದದ ಹೋರಾಟಕ್ಕೆ, ಸಮಾಜವಾದಿ ಚಿಂತನೆಗಳನ್ನು ಅಸ್ತ್ರವಾಗಿ ಬಳಸುತ್ತಾ ಬಂದಿದ್ದ ಡಿ.ಎಸ್.ನಾಗಭೂಷಣ ಅವರ ಅಗಲಿಕೆಯಿಂದ ಆಘಾತಕ್ಕೀಡಾಗಿದ್ದೇನೆ. ಅವರ ಪತ್ನಿ‌ ಮತ್ತು ಗೆಳೆಯರೆಲ್ಲರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಇಂದು ನಮ್ಮನ್ನು ಅಗಲಿದ ಡಿ.ಎಸ್.ನಾಗಭೂಷಣ ಅವರು ‘ಗಾಂಧಿ ಕಥನ’ವನ್ನು‌ ಪ್ರೀತಿಯಿಂದ ಕಳಿಸಿಕೊಟ್ಟಿದ್ದರು. ಅದನ್ನು ಓದುತ್ತಿದ್ದೇನೆ ಎಂದಾಗ ಖುಷಿಪಟ್ಟಿದ್ದರು. ಲೋಹಿಯಾ ಚಿಂತನೆಯ‌‌ ಪುಸ್ತಕಗಳೂ ಸೇರಿದಂತೆ ಅವರ ಎಲ್ಲ ಕೃತಿಗಳ ಮೂಲಕ ನಾಗಭೂಷಣ ನಮ್ಮ ನೆನಪಲ್ಲಿ‌‌‌‌ ಸದಾ ಹಸಿರಾಗಿರುತ್ತಾರೆ ಎಂದು ಸಿದ್ದರಾಮಯ್ಯ ಸ್ಮರಿಸಿದ್ದಾರೆ.

‘ಕೇಂದ್ರಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬರಹಗಾರ ಹಾಗೂ ಸಾಮಾಜಿಕ ಚಿಂತಕ ಡಿ.ಎಸ್. ನಾಗಭೂಷಣ ಅವರು ಕಾಲವಾದ ವಿಷಯ ತಿಳಿದು ಬೇಸರವಾಯಿತು. ಗಾಂಧಿ ಚಿಂತನೆಗಳ ಬಗ್ಗೆ ಮತ್ತಷ್ಟು ಅರಿವು ಮೂಡಿಸಿದ ಅವರ ಅಗಲಿಕೆಯು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಸಂತಾಪಗಳು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

‘ಖ್ಯಾತ ವಿಮರ್ಶಕ, 'ಗಾಂಧಿ ಕಥನ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದಿದ್ದ ಸಾಹಿತಿ ಡಿ.ಎಸ್.​ ನಾಗಭೂಷಣ ಅವರ ನಿಧನ ಸುದ್ಧಿ ದುಃಖ ತರಿಸಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಕಾಂಗ್ರೆಸ್ ನಾಯಕ ಎಸ್.ಆರ್.ಪಾಟೀಲ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT