ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿ.ಟಿ.ದೇವೇಗೌಡರ ಮೊಮ್ಮಗಳ ನಿಧನ: ಬೊಮ್ಮಾಯಿ, ಎಚ್‌ಡಿಕೆ ಸೇರಿ ಗಣ್ಯರಿಂದ ಸಂತಾಪ

Published : 15 ಮೇ 2022, 6:32 IST
ಫಾಲೋ ಮಾಡಿ
Comments

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರ ಮೊಮ್ಮಗಳು ಗೌರಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ 3 ವರ್ಷದ ಗೌರಿಯನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆಕೆ ಶನಿವಾರ ತಡರಾತ್ರಿ ನಿಧನ ಹೊಂದಿದ್ದಾಳೆ.

‘ಮಾಜಿ ಸಚಿವಜಿ. ಟಿ. ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಮಗು ಗೌರಿ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಮಗುವಿನ ಆತ್ಮಕ್ಕೆ ಶಾಂತಿ ಕರುಣಿಸಿ, ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

‘ಮಾಜಿ ಸಚಿವ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಹಸುಗೂಸು ಗೌರಿ ಅನಾರೋಗ್ಯದಿಂದ ಅಸುನೀಗಿರುವ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ. ಆ ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಸ್ಥರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಮಾಜಿ ಸಚಿವ, ಆತ್ಮೀಯರಾದ ಜಿ.ಟಿ ದೇವೇಗೌಡರ ಮೊಮ್ಮಗಳು ಗೌರಿ ಸಾವಿನ ಸುದ್ದಿ ತಿಳಿದು ಅತೀವ ಸಂಕಟವಾಯಿತು. ಬದುಕಿ ಬಾಳಬೇಕಿದ್ದ ಎಳೆಯ ಕಂದಮ್ಮನ ಅಗಲಿಕೆಯಿಂದ ನೊಂದಿರುವ ದೇವೇಗೌಡರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತ ಗೌರಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ, ಮಗುವಿನ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಜಿ.ಟಿ ದೇವೇಗೌಡರು ಹಾಗೂ ಆಕೆಯ ತಂದೆ, ತಾಯಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಶಾಸಕರಾದ ಜಿ.ಟಿ.ದೇವೇಗೌಡ ಅವರ 3 ವರ್ಷದ ಮೊಮ್ಮಗಳು ಗೌರಿಯ ನಿಧನದ ಸುದ್ದಿ ಕೇಳಿ ನಿಜಕ್ಕೂ ಮನಸ್ಸಿಗೆ ನೋವುಂಟಾಯಿತು. ಬದುಕು ಕೆಲವೊಮ್ಮೆ ತುಂಬಾ ಅನಿಶ್ಚಿತ ಮತ್ತು ಕ್ರೂರ. ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸುವ ಶಕ್ತಿಯನ್ನು ದೇವರು ಆ ಕುಟುಂಬಕ್ಕೆ ಕೊಡಲಿ’ ಎಂದು ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

‘ಜಿ.ಟಿ. ದೇವೇಗೌಡರ ಮೊಮ್ಮಗಳು, ಸಹೋದರ ಜಿ.ಡಿ.ಹರೀಶ್ ಗೌಡ ಅವರ ಪುತ್ರಿ ಗೌರಿ ಅನಾರೋಗ್ಯದಿಂದ ನಮ್ಮನ್ನಗಲಿದ ವಿಷಯ ಕೇಳಿ ತೀವ್ರ ದುಃಖವಾಯಿತು. ಕುಟುಂಬಸ್ಥರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ, ಕಂದಮ್ಮನ ಆತ್ಮಕ್ಕೆ ಶಾಂತಿ ದೊರೆಯಲಿ’ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT