ಬೆಂಗಳೂರು: ‘ಮುಡಾ ವಿಚಾರದಲ್ಲಿ ಜಾರಿ ನಿರ್ದೇಶನಾಲಯದ ಕಣ್ಣು ತೆರೆಸುವಂತೆ ಸುಪ್ರೀಂ ಕೋರ್ಟ್ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಇನ್ನಾದರೂ ಎಚ್ಚೆತ್ತುಕೊಂಡು ಸಾಂವಿಧಾನಿಕ ಸಂಸ್ಥೆಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

‘ಕಳೆದ 10-11 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಸಿಬಿಐ ಮತ್ತು ಇ.ಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದ ಎಲ್ಲರಿಗೂ ಈ ತೀರ್ಪು ಸಮಾಧಾನ ಉಂಟು ಮಾಡಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ’ ಎಂದು ತಮ್ಮ ‘ಎಕ್ಸ್’ ಖಾತೆಯಲ್ಲಿ ಪ್ರತಿಪಾದಿಸಿದ್ದಾರೆ.

‘ಈ ವಿಷಯದಲ್ಲಿ ನನ್ನ ಮನದಾಳದ ಮಾತನ್ನೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿಯವರು ಹೇಳಿದ್ದಾರೆ. ‘ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಿಕೊಳ್ಳಬೇಕೇ ಹೊರತು, ಇದಕ್ಕಾಗಿ ಜಾರಿ ನಿರ್ದೇಶನಾಲಯದಂಥ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು’ ಎಂಬ ಅವರ ಮಾತುಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜ್ಞಾವಂತ ಭಾರತೀಯನ ಅಭಿಪ್ರಾಯವಾಗಿದೆ’ ಎಂದಿದ್ದಾರೆ.

‘ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಬಿಜೆಪಿ ಮತ್ತು ಅದರ ಸಂಗಾತಿಗಳು ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ’ ಎಂದಿದ್ದಾರೆ.

‘ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಉಳಿಸಿ, ಕಾಪಾಡಿದೆ’ ಎಂದಿದ್ದಾರೆ.

‘ಸುಪ್ರೀಂ ಕೋರ್ಟ್ ಕೈಗೊಂಡ ಕ್ರಮವು, ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

‘ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಕಪೋಲಕಲ್ಪಿತ ಆರೋಪಗಳನ್ನು ಮಾಡುತ್ತಾ ಬಂದಿರುವ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ತಮ್ಮ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.