ಮುದಗಲ್ (ರಾಯಚೂರು): ‘ಬಿಜೆಪಿ ಭ್ರಷ್ಟಾಚಾರದ ಸರ್ಕಾರವಾಗಿದೆ. ಬಿ ಎಂದರೆ ಭ್ರಷ್ಟಾಚಾರ, ಜೆಪಿ ಎಂದರೆ ಜನತಾ ಪಾರ್ಟಿ, ಭ್ರಷ್ಟಾಚಾರದಲ್ಲಿ ತೊಡಗಿರುವ ಪಕ್ಷವಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಮಸ್ಕಿ ಉಪಚುನಾಣೆಯ ಪ್ರಚಾರಕ್ಕಾಗಿ ಮುದಗಲ್ ಪಟ್ಟಣದ ಹೆಲಿಪ್ಯಾಡ್‍ನಲ್ಲಿ ಭಾನುವಾರ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಯಡಿಯೂರಪ್ಪ ಅವರು ಕುಳಿತಿರುವ ಹಡಗು ಮುಳುಗುತ್ತಿದೆ. ಅವರದ್ದೇ ಪಕ್ಷದ ಬಸನಗೌಡ ಯತ್ನಾಳ ಅವರು ಸಿಎಂ ಕುರಿತಾದ ಮಾತುಗಳನ್ನಾಡುತ್ತಿದ್ದಾರೆ. ಯಡಿಯೂರಪ್ಪ ಮನೆಗೆ ಹೋಗುತ್ತಾರೆ. ಅವರು ಮತ್ತು ಇಡೀ ಅವರ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ಬಿಜೆಪಿಯವರು ದುಡ್ಡು ಹಂಚಿ ಮತ ಕೇಳುತ್ತಿದ್ದಾರೆ. ಇದನ್ನು ನೋಡಿಕೊಂಡು ಕಾಂಗ್ರೆಸ್ ಸುಮ್ಮನೆ ಕುಳಿತುಕೊಳ್ಳಲಾರದು. ಪಕ್ಷದವರು ಪ್ರತಿಭಟನೆ ಮಾಡಿದ್ದಾರೆ’ ಎಂದರು.

‘ನೂರಕ್ಕೆ ನೂರರಷ್ಟು ಬಿಜೆಪಿ ಸೋಲುತ್ತದೆ. ಅದಕ್ಕಾಗಿಯೇ ದುಡ್ಡು ಹಂಚಲು ಶುರುಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.