ಮುಖ್ಯಮಂತ್ರಿ @BSYBJP ಅವರು ತಮ್ಮ ಸರ್ಕಾರದ ನೂರು ದಿನಗಳನ್ನು ಒಂದು ಅದ್ಭುತ ವಿಡಿಯೋ ಪ್ರಸಾರದ ಮೂಲಕ ಆಚರಿಸಿದ್ದಾರೆ. ಈ ಮೂಲಕ ತಾವು ನಡೆಸಿದ್ದ ಆಪರೇಷನ್ ಕಮಲಕ್ಕೆ ಸಾಕ್ಷ್ಯ ಒದಗಿಸಿದ್ದಾರೆ. ರಾಜ್ಯದ ಜನ ಅವರಿಗೆ ಕೃತಜ್ಞತೆ ಸಲ್ಲಿಸಬೇಕು. @INCKarnataka#ResignBSYShah
— Siddaramaiah (@siddaramaiah) November 2, 2019
ಶಾಸಕರ ರಾಜೀನಾಮೆಗೂ ಬಿಜೆಪಿಗೂ ಸಂಬಂಧ ಇಲ್ಲ ಎನ್ನುತ್ತಿದ್ದ @BSYBJP,
— Siddaramaiah (@siddaramaiah) November 2, 2019
ಈಗ ಆಪರೇಷನ್ ಕಮಲ ಅಮಿತ್ ಶಾ ನಿರ್ದೇಶನದಲ್ಲಿಯೇ ನಡೆದಿತ್ತು ಎಂಬ ಸತ್ಯವನ್ನು ವೀಡಿಯೋದಲ್ಲಿ ಹೇಳಿದ್ದಾರೆ. ಇಂತಹ ಗೃಹಸಚಿವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇದೆಯೇ? @INCKarnataka #ResignBSYShah
ನಮ್ಮ ಪಕ್ಷದ ಶಾಸಕರಿಗೆ ಆಮಿಷಗಳನ್ನು ಒಡ್ಡಿ ಮುಂಬೈನ ಹೊಟೇಲ್ನಲ್ಲಿಟ್ಟು ಸರ್ಕಾರದ ಪತನಕ್ಕೆ ನೇರ ಕಾರಣರಾಗಿರುವ @AmitShah ಆಪರೇಷನ್ ಕಮಲ ಎಂಬ ಅಸಂವಿಧಾನಿಕ ಕಾರ್ಯಾಚರಣೆಯ ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು. @INCKarnataka #ResignBSYShah
— Siddaramaiah (@siddaramaiah) November 2, 2019
ಆಪರೇಷನ್ ಕಮಲದ ಹೆಸರಿನಲ್ಲಿ ಸಂವಿಧಾನದ ಕಗ್ಗೊಲೆಯಾಗುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರು ನೇರವಾಗಿ ಈ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಪುರಾವೆ ಸಿಕ್ಕಿದೆ. ಆದ ಕಾರಣ ಇದನ್ನು ಇಲ್ಲಿಗೆ ಕೈಬಿಡುವ ಪ್ರಶ್ನೆಯೇ ಇಲ್ಲ. ಇದನ್ನು ಸುಪ್ರೀಮ್ ಕೋರ್ಟ್ನ ಗಮನಕ್ಕೆ ತಂದು ನ್ಯಾಯ ಕೇಳ್ತೇವೆ. @INCKarnataka #ResignBSYShah
— Siddaramaiah (@siddaramaiah) November 2, 2019
ನಮ್ಮ ಪಕ್ಷದ ವತಿಯಿಂದ ರಾಜ್ಯಪಾಲರನ್ನು ಭೇಟಿಮಾಡಿ, ಯಡಿಯೂರಪ್ಪನವರ ರಾಜೀನಾಮೆ ಪಡೆಯುವಂತೆ ಮನವಿ ಪತ್ರ ನೀಡಲಿದ್ದೇವೆ. ರಾಷ್ಟ್ರಪತಿಯವರನ್ನೂ ಭೇಟಿ ಮಾಡಿ, ಆಪರೇಷನ್ ಕಮಲದಲ್ಲಿ ಭಾಗಿಯಾದ ಕೇಂದ್ರ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇವೆ. @INCKarnataka #ResignBSYShah
— Siddaramaiah (@siddaramaiah) November 2, 2019
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.