ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಕೋರಲಾದ ಅರ್ಜಿಯ ಮೇಲಿನ ತೀರ್ಪನ್ನು ಹೈಕೋರ್ಟ್ ಶುಕ್ರವಾರ (ಫೆ.07) ಪ್ರಕಟಿಸಲಿದೆ.

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಹಾಗೂ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಬೆಳಿಗ್ಗೆ 10.30ಕ್ಕೆ ಈ ತೀರ್ಪು ಪ್ರಕಟಿಸಲಿದ್ದಾರೆ.

ಪೋಕ್ಸೊ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಯ್ದಿರಿಸಿರುವ ತೀರ್ಪನ್ನೂ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಶುಕ್ರವಾರ ಬೆಳಿಗ್ಗೆ 10.30ಕ್ಕೆ (ಫೆ.07) ಪ್ರಕಟಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.