ಬಾಗಲಕೋಟೆ: ‘ಸಿದ್ದರಾಮಯ್ಯ ಜಾತಿವಾದಿಯಲ್ಲ. ಬಡವರ ಪರ ಇರುವ ಅವರಿಗೆ ಜಾತಿ ವ್ಯಾಮೋಹ ಇಲ್ಲ. ಬಸವಣ್ಣನ ಅನುಯಾಯಿ ಎಂದು ಹಲವು ಬಾರಿ ಹೇಳಿದ್ದಾರೆ. ತಾವು ಬಸವಣ್ಣನ ಅನುಯಾಯಿ ಎಂದು ಯಡಿಯೂರಪ್ಪ ಹೇಳಲಿ’ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಸವಾಲು ಹಾಕಿದರು.

‘ಸಿದ್ದರಾಮಯ್ಯ ಜಾತಿವಾದಿ’ ಎಂದು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಮಾಡಿದ ಆರೋಪಕ್ಕೆ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಯಡಿಯೂರಪ್ಪ ಮನುಸ್ಮೃತಿಯ ಅನುಯಾಯಿ. ಚುನಾವಣೆಯಲ್ಲಿ ಮತಗಳಿಕೆಗಾಗಿ ಅಪಪ್ರಚಾರ ಮಾಡುವುದನ್ನು ಖಂಡಿಸುತ್ತೇನೆ’ ಎಂದರು.

‘ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಇರುವುದು ಕಡ್ಡಾಯ

ಮಾಡುವುದರ ಜೊತೆಗೆ, ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದರು. ಕೂಡಲಸಂಗಮ ಅಭಿವೃದ್ಧಿಗೂ ಆದ್ಯತೆ ನೀಡಿದರು. ಯಡಿಯೂರಪ್ಪ ಏನೂ ಮಾಡಲಿಲ್ಲ’ ಎಂದು ಆರೋಪಿಸಿದರು.

‘ಸಿದ್ದರಾಮಯ್ಯ ಅವರನ್ನು ಸಾಲಗಾರ ಸಾಹುಕಾರ ಎಂದು ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಸ್ಥಿರವಿದೆ. ಬೇಕಾದರೆ ಬಾಗಲಕೋಟೆಯಲ್ಲೇ ಬಹಿರಂಗ ಚರ್ಚೆಗೆ ಬರಲಿ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಆರ್ಥಿಕ ಶಿಸ್ತನ್ನು ಉಲ್ಲಂಘಿಸಿದ್ದಾರೆ. ಸಿದ್ದರಾಮಯ್ಯ ಆರ್ಥಿಕ ಶಿಸ್ತು ಉಲ್ಲಂಘಿಸಿಲ್ಲ’ ಎಂದರು.

‘1956ರಿಂದ 2014ರವರೆಗೆ ಭಾರತದ ಸಾಲ 53 ಲಕ್ಷ ಕೋಟಿ ಇತ್ತು. 12 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ₹165 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದಕ್ಕೆ ನಾಚಿಕೆಯಾಗಬೇಕಲ್ಲವೇ? ಸಾಲದ ಪ್ರಮಾಣ ಜಿಡಿಪಿಯ ಶೇ 56ರಷ್ಟಿದೆ. ವಿತ್ತೀಯ ಕೊರತೆ ಶೇ4.4ರಷ್ಟಿದೆ. ಆರ್ಥಿಕ ಶಿಸ್ತು ಯಾರು ಉಲ್ಲಂಘಿಸಿದ್ದಾರೆ ಎಂದು ಬೊಮ್ಮಾಯಿ ಅವರಿಗೆ ಗೊತ್ತಿಲ್ಲವೇ?’ ಎಂದು ಪ್ರಶ್ನಿಸಿದರು.

‘ಬಿಜೆಪಿ ಪಾಪರ್ ಪಾರ್ಟಿ. ಪಕ್ಷದಿಂದ ಉಚ್ಚಾಟಿಸಲಾದ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಕರೆತಂದು ಬಂದು ಚುನಾವಣೆಗೆ ಪ್ರಚಾರ ಮಾಡಲಾಗುತ್ತಿದೆ. ಎಲ್ಲಿದ ಪಕ್ಷದ ಶಿಸ್ತು? ನಾಚಿಕೆಯಾಗುವುದಿಲ್ಲವೇ’ ಎಂದು ಪ್ರಶ್ನಿಸಿದರು.

‘ಬಾಗಲಕೋಟೆಯಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರಾಜೀವ್ಗಾಂಧಿ ವಿಶ್ವವಿದ್ಯಾಲಯದಲ್ಲಿನ ನಿಧಿಯಿಂದ ತೆಗೆದುಕೊಳ್ಳುತ್ತಿದ್ದೇವೆ. ವಿವಿಯಲ್ಲಿ ₹1,000 ಕೋಟಿ ಇದ್ದು, ರಾಮನಗರ ಹಾಗೂ ಇಲ್ಲಿಗೆ ಅನುದಾನ ನೀಡಲಾಗಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-19-1329029007

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.