ಮಡಿಕೇರಿ: ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ದು ಹೇಡಿಗಳ ಕೆಲಸ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕೊಡಗಿನಲ್ಲಿ ಸಮರ್ಪಕವಾಗಿ ಪರಿಹಾರ ನೀಡಿಲ್ಲ. ಡಿ.ಸಿ ಕಚೇರಿ ತಡೆಗೋಡೆ ಕಳಪೆಯಾಗಿದೆ. ಇದು ನನಗೆ ಗೊತ್ತಾಗಬಾರದು ಎಂದೇ ಪ್ರತಿಭಟನೆ ಮಾಡಿದ್ದಾರೆ. ಸರ್ಕಾರ ಸತ್ತಿದೆ. ಹಾಗಾಗಿ ಹಣ ಕೊಟ್ಟು ಜನರನ್ನು ಕರೆದುಕೊಂಡು ಬಂದು ಘೋಷಣೆ ಕೂಗಿಸಿದ್ದಾರೆ ಎಂದು ತಿಳಿಸಿದರು.

ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಕೊಡಗಿನ ಮದೆನಾಡು ಕೊಯನಾಡು ಪ್ರದೇಶಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.

ಕೆಲವು ಸಂತ್ರಸ್ತರು ತಮಗೆ ಸರ್ಕಾರ ನೀಡಿದ ಪರಿಹಾರ ಏನೇನೂ ಸಾಲದು ಎಂದು ಅಳಲು ತೋಡಿಕೊಂಡರು.

ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಗೆ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಪ್ಪುಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ವೃತ್ತದ ಮತ್ತೊಂದು ಪಾರ್ಶ್ವದಲ್ಲಿ ಪ್ರತಿಭಟನೆ ಕುಳಿತರು. ಸುಮಾರು ಅರ್ಧಗಂಟೆಗಳ ಕಾಲ ಉಭಯ ಕಾರ್ಯಕರ್ತರು ಒಂದೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.