ಬೆಂಗಳೂರು: ಸುಳ್ಳು ಹೇಳುವ ಚಾಳಿ ಇರುವ ಬಿಜೆಪಿಗೆ ರಾಜ್ಯದ ಜನ ಪೂರ್ಣ ಅಧಿಕಾರವನ್ನೇ ಕೊಟ್ಟಿಲ್ಲ, ಜೆಡಿಎಸ್ಗೆ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೆಆರ್ಎಸ್ಗೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆಯಲ್ಲಿ ಅವರು ಮಾತನಾಡಿದರು.
.2028ರಲ್ಲೂ ಗೆದ್ದು ನಾವೇ ಅಧಿಕಾರಕ್ಕೆ: ಸಿಎಂ ಸಿದ್ದರಾಮಯ್ಯ.
ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಎರಡು ಬಾರಿ ಅಧಿಕಾರಕ್ಕೆ ಬಂದರು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದು ನುಡಿದರು.

ಕೃಷಿ ಪ್ರಗತಿಗಾಗಿ ವರ್ಷಕ್ಕೆ ₹19 ಸಾವಿರ ಕೋಟಿ ಪಂಪ್ ಸೆಟ್ ಸಬ್ಸಿಡಿಯನ್ನು ರೈತರಿಗೆ ಕೊಟ್ಟಿದ್ದೇವೆ. ನಾವು ಈ ಬಾರಿ ಕಾವೇರಿ ಅಭಿವೃದ್ಧಿ ನಿಗಮಕ್ಕೆ ₹3 ಸಾವಿರ ಕೋಟಿ ಹಣ ಕೊಟ್ಟಿದ್ದೇವೆ. ಈಗ ಟೀಕಿಸುತ್ತಿರುವವರು ಅಧಿಕಾರದಲ್ಲಿದ್ದಾಗ ಕಾವೇರಿ ನಿಗಮಕ್ಕೆ ಹಣ ಕೊಡಲಿಲ್ಲ ಎಂದು ಹೇಳಿದರು.
.ಬಂಡೆ ರೀತಿ ನಮ್ಮ ಸರ್ಕಾರ ಭದ್ರ: ಸಿದ್ದರಾಮಯ್ಯ, ಡಿಕೆಶಿ ಒಗ್ಗಟ್ಟು ಪ್ರದರ್ಶನ.
ಕೃಷ್ಣರಾಜಸಾಗರದ ಒಟ್ಟು 124 ಅಡಿ ಸಾಮರ್ಥ್ಯದಲ್ಲಿ 120.90 ಅಡಿ ಭರ್ತಿ ಆಗಿದೆ. ಆಣೆಕಟ್ಟೆಗೆ 49 ಟಿಎಂಸಿ ನೀರಿನ ಸಾಮರ್ಥ್ಯವಿದೆ. 193 ವರ್ಷಗಳಲ್ಲಿ 76 ಬಾರಿ ಭರ್ತಿಯಾಗಿದೆ. 2023-24 ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೇ ಸಿದ್ದರಾಮಯ್ಯ ಕಾಲ್ಗುಣ ಚೆನ್ನಾಗಿಲ್ಲ, ಕಾಂಗ್ರೆಸ್ ಸರ್ಕಾರದ ಕಾಲ್ಗುಣ ಸರಿಯಿಲ್ಲ ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ವಿರೋಧ ಪಕ್ಷಗಳು ಮೂಢಾತ್ಮರು ಈಗ ಏನು ಹೇಳ್ತಾರೆ ಎಂದು ಪ್ರಶ್ನಿಸಿದರು.
.ನಮ್ಮ ಶಾಸಕರೆಲ್ಲ ಒಗ್ಗಟ್ಟಾಗಿದ್ದೇವೆ, ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ: RVD.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.