ಬೆಂಗಳೂರು: ‘ಅಧಿಕಾರಿಗಳು ಜಾತ್ಯತೀತವಾಗಿ ಕಾರ್ಯನಿರ್ವಹಿಸಬೇಕು. ಸ್ವಜಾತಿ ಪಕ್ಷಪಾತ ಮಾಡಬೇಡಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಹಾಗೂ ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಜಾತಿ ವ್ಯವಸ್ಥೆ ನಿರ್ಮೂಲನೆಯಾಗಿಲ್ಲ. ರಾಜ್ಯದಲ್ಲಿನ ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ಎಲ್ಲರಿಗೂ ಸಮಾನ ಅವಕಾಶ ನೀಡಬೇಕು. ಜಾತಿ ಮತ್ತು ವರ್ಗ ವ್ಯವಸ್ಥೆ ಅಳಿಯಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ’ ಎಂದರು.

ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಎಲ್ಲರಿಗೂ ನ್ಯಾಯ ಒದಗಿಸಬೇಕು. ಬಡವರ ಹಕ್ಕುಗಳ ರಕ್ಷಣೆಗೆ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.