ಬೆಂಗಳೂರು: ‘ರೈತರೊಂದಿಗೆ ನೇರಒಡನಾಟ ಹೊಂದಿರುವ ಸಹಕಾರ ಇಲಾಖೆಯು ರೈತಾಪಿ ವರ್ಗದ ಪ್ರಗತಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸ ಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಅಲಿ ಅಸ್ಗರ್ ರಸ್ತೆಯ ಸಹಕಾರ ನಿಬಂಧಕರ ಕಚೇರಿ ಆವರಣದಲ್ಲಿ ನಿರ್ಮಿಸಲಾಗಿರುವ ‘ಸಹಕಾರ ಸಮೃದ್ಧಿ ಸೌಧ’ವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ.2023ರಲ್ಲಿ ಈ ಕಟ್ಟಡದ ಭೂಮಿ ಪೂಜೆ ನಾನೇ ನೆರವೇರಿಸಿದ್ದೆ. ಮೂರು ವರ್ಷಗಳಲ್ಲಿ ₹19.43 ಕೋಟಿವೆಚ್ಚದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ವಿಧಾನಸೌಧ ದಂತೆಯೇ ಸಹಕಾರ ಸೌಧವನ್ನು ನಿರ್ಮಿಸಿದ್ದೀರಿ. ದೊಡ್ಡ ಕಟ್ಟಡ ನಿರ್ಮಾಣ ಮಾಡಿದ್ದು, ಇದನ್ನು ಚೆನ್ನಾಗಿ ಬಳಸಿಕೊಳ್ಳಿ. ಸೌಧದ ಜತೆಯಲ್ಲಿ ನಿಮ್ಮ ಸೇವೆಯೂ ಚೆನ್ನಾಗಿ ಇರಲಿ’ ಎಂದು ಕಿವಿಮಾತು ಹೇಳಿದರು.

‘ಒಂದು ಊರಿನಲ್ಲಿ ಒಂದು ಶಾಲೆ, ಪಂಚಾಯಿತಿ ಮತ್ತು ಸಹಕಾರ ಸಂಘ ಇರಲೇಬೇಕು. ಆಗ ಮಾತ್ರ ಗ್ರಾಮಗಳ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ಪ್ರಧಾನಿಯಾಗಿದ್ದ ನೆಹರೂ ಹೇಳಿದ್ದರು. ಹಾಲಿನ ಸಹಕಾರ ಸಂಘಗಳು ಪ್ರತಿ ಊರಿನಲ್ಲಿ ರೂಪುಗೊಂಡು ಬದಲಾವಣೆಗೆ ಕಾರಣವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಹೆಚ್ಚಿಸಬೇಕು’ ಎಂದು ತಿಳಿಸಿದರು. ಸಚಿವ ಎಚ್.ಕೆ.ಪಾಟೀಲ, ಶಾಸಕ ರಿಜ್ವಾನ್ ಅರ್ಷದ್, ವಿಧಾನಪರಿಷತ್ ಸದಸ್ಯೆ ಬಿಲ್ಕಿಸ್ ಬಾನು, ಸಹಕಾರ ಇಲಾಖೆ ಕಾರ್ಯದರ್ಶಿ ಎಸ್.ಬಿ. ಶೆಟ್ಟಣ್ಣವರ್, ನಿಬಂಧಕ ಪಿ.ಎಸ್.ಕಾಂತರಾಜು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-51-1828689782

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.