ಬೆಂಗಳೂರು: 'ಸಿದ್ದರಾಮಯ್ಯ ಅವರು ಕಾಂಗ್ರೆಸ್ ಗೆ ಒಂದು ಶಕ್ತಿ. ಎಂಟು ವರ್ಷ ಕರ್ನಾಟಕದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಅವರ ಅನುಭವ ದೇಶದಲ್ಲಿ ಕಾಂಗ್ರೆಸ್ ಪ್ರಭಾವ ವಿಸ್ತರಿಸಲು ನೆರವಾಗಲಿದೆ' ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

'ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸಿದ್ದರಾಮಯ್ಯ ಅವರ ಆಯ್ಕೆಯಿಂದ ಪಕ್ಷ ಸಂಘಟನೆಗೆ ಮತ್ತಷ್ಟು ಬಲ ಬಂದಂತಾಗಿದೆ' ಎಂದಿದ್ದಾರೆ.

'ಸಿದ್ದರಾಮಯ್ಯ ಅವರು ಸಾರ್ವಜನಿಕ ಜೀವನದಲ್ಲಿ ಗಳಿಸಿರುವ ಅಪಾರ ಅನುಭವ, ಸಾಮಾಜಿಕ ನ್ಯಾಯದ ಪರವಾದ ಅಚಲ ಬದ್ಧತೆ ಹಾಗೂ ಸಂವಿಧಾನದ ಮೌಲ್ಯಗಳ ಮೇಲೆ ಅಚಲ ನಂಬಿಕೆ ಹೊಂದಿರುವವರು. ದೇಶದಲ್ಲಿ ಇಂದು ಸಂವಿಧಾನಿಕ ಮೌಲ್ಯಗಳ ಮೇಲೆ ನಡೆಯುತ್ತಿರುವ ದಾಳಿ ಹಾಗೂ ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವ ಪ್ರವೃತ್ತಿಯ ವಿರುದ್ಧ ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಅವರ ಅನುಭವ, ಚಿಂತನೆಗಳು ಮತ್ತಷ್ಟು ಶಕ್ತಿ ತುಂಬಲಿವೆ.

ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಎಲ್ಲರೂ ಒಗ್ಗಟ್ಟಾಗಿ ಸಂವಿಧಾನದ ರಕ್ಷಣೆಗೆ, ಸಾಮಾಜಿಕ ನ್ಯಾಯದ ವಿಸ್ತರಣೆಗೆ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ಮತ್ತು ಜನವಿರೋಧಿ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ಮತ್ತು ದೇಶದ ಸಾಮಾನ್ಯ ಜನರ ಹಿತಾಸಕ್ತಿಗಳನ್ನು ಕಾಪಾಡುವ ಹೋರಾಟವನ್ನು ಇನ್ನಷ್ಟು ಬಲಿಷ್ಠಗೊಳಿಸುತ್ತೇವೆ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.