ಬೆಂಗಳೂರು: ‘ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಮೂಲಕ ಚುನಾವಣೆ ಮಾಡಬೇಕು ಎನ್ನುವ ತೀರ್ಮಾನವನ್ನು ನಮ್ಮ ಅನುಭವದ ಮೇಲೆ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

‘ಇವಿಎಂ ಬಳಸಿದ ಹಲವು ದೇಶಗಳು ಮತ್ತೆ ಬ್ಯಾಲಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ’ ಎಂದೂ ಅವರು ಹೇಳಿದ್ದಾರೆ.

‘ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬ್ಯಾಲಟ್ ಪೇಪರ್ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದರೆ, ಬಿಜೆಪಿ ಮುಖಂಡರು ಏಕೆ ಗಾಬರಿಯಾಗಬೇಕು? ಇದು ಕರ್ನಾಟಕ ಸರ್ಕಾರದ ತೀರ್ಮಾನ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಅವಕಾಶವಿದೆ. ಈ ಕುರಿತು ಬಿಜೆಪಿ ಅವಧಿಯಲ್ಲೇ ಕಾನೂನು ರೂಪಿಸಲಾಗಿತ್ತು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

‘ಕಳ್ಳನ ಮನಸ್ಸು ಹುಳ್ಳಗೆ ಎಂಬಂತೆ ಬಿಜೆಪಿ ವರ್ತಿಸುತ್ತಿದೆ. ಕೇಂದ್ರ ಚುನಾವಣಾ ಆಯೋಗ ಅವರ ತೀರ್ಮಾನದಂತೆ ಲೋಕಸಭೆ, ವಿಧಾನಸಭೆಗಳ ಚುನಾವಣೆ ನಡೆಸುತ್ತದೆ. ನಾವು ಲೋಕಸಭಾ ಚುನಾವಣೆಗಳನ್ನು ಪರಿಶೀಲನೆ ಮಾಡಿದ್ದೇವೆ. ಸಹಕಾರಿ ಸಂಘಗಳಿಗೆ ಚುನಾವಣೆ ನಡೆಸುವಂತೆ ಬ್ಯಾಲಟ್ ಪೇಪರ್ ಬಳಸಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುತ್ತೇವೆ’ ಎಂದಿದ್ದಾರೆ.
.ಇವಿಎಂ ತಿರುಚಬಹುದು: ಬ್ಯಾಲೆಟ್ ಪೇಪರ್ಗೆ ಮರಳುವುದೇ ಉತ್ತಮ; ಸಿದ್ದರಾಮಯ್ಯ .ಪಾರದರ್ಶಕ ಚುನಾವಣೆ ಧಿಕ್ಕರಿಸುವುದೇ ಕಾಂಗ್ರೆಸ್ ಅಜೆಂಡಾ: ಬಿ.ವೈ.ವಿಜಯೇಂದ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.