ಬೆಂಗಳೂರು: ‘ಹೋಟೆಲ್, ರೆಸಾರ್ಟ್,ವಸತಿಗೃಹಗಳ ಕೋವಿಡ್ ಕಾಲದ ವಿದ್ಯುತ್, ನೀರಿನ ಶುಲ್ಕ ಮನ್ನಾ ಮಾಡುವುದು ಸೇರಿದಂತೆ ಈ ಉದ್ಯಮ ನೆಲಕಚ್ಚದಂತೆ ನೆರವು ನೀಡಬೇಕು’ ಎಂದುಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪಅವರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

‘ಎಲ್ಲ ಬಿಪಿಎಲ್ ಕುಟುಂಬಗಳಿಗೆ ತಲಾ ₹ 10 ಸಾವಿರ ಘೋಷಿಸಬೇಕು. ತೀವ್ರ ಸಂಕಷ್ಟದಲ್ಲಿರುವ ಹೋಟೆಲ್, ವಸತಿ ಗೃಹ, ಫೋಟೋಗ್ರಾಫರ್ಗಳು, ಅಲಂಕಾರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ತಕ್ಷಣ ಪ್ಯಾಕೇಜ್ ಘೋಷಿಸಬೇಕು. ಹೋಟೆಲ್, ಕ್ಯಾಂಟೀನ್ ಮಾಲೀಕರ ಬ್ಯಾಂಕ್ ಸಾಲ ವಸೂಲಾತಿ ಮುಂದೂಡಬೇಕು. ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು. ಜೊತೆಗೆ, ಎಲ್ಲಾ ಉತ್ಪಾದಕ ಮತ್ತು ಸೇವಾ ವಲಯಗಳ ಜನರು ಮಾಡಿರುವ ಸಾಲದ ಮೇಲಿನ ಬಡ್ಡಿಯನ್ನೂ ಮನ್ನಾ ಮಾಡಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

‘ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಸಾವಿರಾರು ಹೋಟೆಲ್ಗಳು ಬಂದ್ ಆಗಿವೆ. ಹೋಟೆಲ್, ಕ್ಯಾಂಟೀನ್ ಕಟ್ಟಡಗಳ ಬಾಡಿಗೆ ಕಟ್ಟಲಾಗದೆ ಮಾಲೀಕರು ಪರಿತಪಿಸುತ್ತಿದ್ದಾರೆ. ಬೆಂಗಳೂರು ನಗರ ಮತ್ತು ಅಕ್ಕಪಕ್ಕದ ನಾಲ್ಕೈದು ಜಿಲ್ಲೆಗಳಲ್ಲೇ 20 ಸಾವಿರಕ್ಕೂ ಹೆಚ್ಚು ಹೋಟೆಲ್ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಅವರು ಕುಟುಂಬ ನಿರ್ವಹಿಸಲಾಗದೆ ಸಂಕಷ್ಟದಲ್ಲಿದ್ದಾರೆ. ಈ ಕಾರ್ಮಿಕರ ಮಕ್ಕಳು ಶಿಕ್ಷಣ ತೊರೆಯಬೇಕಾದ ಸ್ಥಿತಿ ಬಂದೊದಗಿದೆ. ಸೇವಾ ವಲಯ ಸ್ಥಗಿತಗೊಂಡಿರುವುದರಿಂದ ಪ್ರವಾಸೋದ್ಯಮವನ್ನು ನೆಚ್ಚಿಕೊಂಡಿದ್ದ ವಸತಿಗೃಹಗಳ ಮಾಲೀಕರು ಮತ್ತು ಕೆಲಸಗಾರರು ದುಡಿಮೆ ಇಲ್ಲದೆ ಕಂಗಾಲಾಗಿದ್ದಾರೆ’ ಎಂದೂ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.