ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಿರ್ಧಾರವನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಎಲ್ಪಿಜಿ ಸಿಲಿಂಡರ್ ಪೂರೈಕೆಯ ವ್ಯತ್ಯಯದಿಂದ ಪರದಾಡುತ್ತಿರುವ ಜನರನ್ನು ಬೆಲೆ ಏರಿಕೆ ಮತ್ತಷ್ಟು ಸಂಕಷ್ಟಕ್ಕೆ ದೂಡಲಿದೆ. ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ದರ ಹೆಚ್ಚಳ ಮಾಡುವ ನಿರೀಕ್ಷೆ ಇತ್ತು. ನರೇಂದ್ರ ಮೋದಿ ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ತೈಲ ದರಗಳನ್ನು ಹೆಚ್ಚಿಸಿದ್ದಾರೆ. ಈ ಬೆಲೆಏರಿಕೆ ಜನಸಾಮಾನ್ಯರ ಮೇಲೆ ಪರಿಣಾಮ ಬೀರಲಿದ್ದು, ಕಾರ್ಮಿಕರು, ರೈತರು, ಬಡವರ ಬದುಕು ದುಸ್ತರವಾಗಲಿದೆ’ ಎಂದರು.

‘ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಪೆಟ್ರೋಲ್ ಬೆಲೆ ಕಡಿಮೆ ಇತ್ತು. ರಾಜ್ಯ ಸರ್ಕಾರ ಸ್ವಲ್ಪ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ಮುಖಂಡರು ಟೀಕೆ ಮಾಡಿದ್ದರು. 2014ಕ್ಕೂ ಮೊದಲು ₹413 ಇದ್ದ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ಈಗ ₹1,000 ದಾಟಿದೆ. ನಿತ್ಯದ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಜನಜೀವನವನ್ನು ಅಸ್ತವ್ಯಸ್ತಗೊಳಿಸಲಿದೆ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.