ನಾವಿಬ್ಬರೂ ಸಹೋದರರು: ಡಿಕೆಶಿ
‘ನಾವಿಬ್ಬರು ಸಹೋದರರಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ನೀವುಗಳು ಸದಾ ಗುಂಪು, ಗುಂಪು ಎಂದು ಬಿಂಬಿಸುತ್ತಿದ್ದೀರಿ. ನಮ್ಮಲ್ಲಿ ಯಾವುದೇ ಗುಂಪಿಲ್ಲ’ ಎಂದು ಪುನರುಚ್ಚರಿಸಿದರು.
ಸಿದ್ದರಾಮಯ್ಯ ಅವರನ್ನು ಉಪಾಹಾರಕ್ಕೆ ಆಮಂತ್ರಿಸಿದ್ದೀರಾ ಎಂಬ ಪ್ರಶ್ನೆಗೆ ‘ಇದು ನನಗೆ ಹಾಗೂ ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ನಮ್ಮ ಜೊತೆ 140 ಶಾಸಕರಿದ್ದಾರೆ. ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ ಒಬ್ಬರೇ. ಪಕ್ಷದ ವಿಚಾರ ಬಂದಾಗ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ’ ಎಂದರು.